ಹಾಸನ: ಜಿಲ್ಲೆಯಾದ್ಯಂತ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ 7 ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

ತಪ್ಪಿತಸ್ಥ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಪೋಷಕರಿಗೆ ಶಿಕ್ಷಣದ ಮಹತ್ವ ತಿಳಿಸಿ ಮಕ್ಕಳನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಆಯಾ ತಾಲ್ಲೂಕು ತಹಶೀಲ್ದಾರರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು, ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯ ಕುರಿತು ಕರಪತ್ರ ಹಾಗೂ ಭಿತ್ತಿಪತ್ರ ಅಂಟಿಸುವ ಮೂಲಕ ಸಾರ್ವಜನಿಕರಲ್ಲಿ ಹಾಗೂ ಅಂಗಡಿ, ವಿವಿಧ ಸಂಸ್ಥೆಗಳ ಮಾಲೀಕರಲ್ಲಿ ಅರಿವು ಮೂಡಿಸಲಾಯಿತು.

14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ದಿಮೆಯಲ್ಲಿ ಹಾಗೂ 14 ರಿಂದ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಕೆಲಸದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಮಕ್ಕಳು ಕೆಲಸದಲ್ಲಿ ತೊಡಗಿರುವುದು ಕಂಡುಬಂದಲ್ಲಿ ಕಾರ್ಮಿಕ ಸಹಾಯವಾಣಿ 155214, ಮಕ್ಕಳ ಸಹಾಯವಾಣಿ 1098 ಹಾಗೂ ಹತ್ತಿರದ ಪೊಲೀಸ್ ಠಾಣೆ ಹಾಗೂ ಆಯಾ ತಾಲ್ಲೂಕು ಹಿರಿಯ/ಕಾರ್ಮಿಕ ನಿರೀಕ್ಷಕರ ಕಚೇರಿ ದೂರು ನೀಡಬಹುದಾಗಿದೆ. ಐಪಿಜಿಆರ್ಎಸ್ ಹಾಗೂ ಪೆನ್ಸಿಲ್ ಪೋರ್ಟಲ್ಗಳಲ್ಲೂ ಸಾರ್ವಜನಿಕರು ದೂರು ದಾಖಲಿಸಬಹುದು ಎಂದು ಕಾರ್ಮಿಕ ಅಧಿಕಾರಿ ಯಮುನಾ ಕೆ.ಎನ್. ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-36-577909572

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.