ಹಾಸನ: ಜಿಲ್ಲೆಯ ಎಲ್ಲ ತಾಲ್ಲೂಕು ಮಟ್ಟದಲ್ಲಿ ಕೌಶಲ ಸಮಿತಿ ಸಭೆಯನ್ನು ಜುಲೈ 27ಕ್ಕೆ ನಡೆಯುವ ಜಿಲ್ಲಾ ಮಟ್ಟದ ಸಭೆಯೊಳಗೆ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಕೌಶಲ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸಮಿತಿಯ ಉದ್ದೇಶ ಮತ್ತು ಕಾರ್ಯಗಳ ಬಗ್ಗೆ ತಿಳಿವಳಿಕೆ ನೀಡಬೇಕು ಎಂದರು.

ಜಿಲ್ಲಾ ಮಟ್ಟದಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಇದುವರೆಗೆ ಒಂದೂ ಸಭೆ ಏಕೆ ಮಾಡಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ಏನೇನು ಕಾರ್ಯಕ್ರಮ ನಿರೂಪಿಸಿದ್ದೀರಿ? ಯಾವ ಯಾವ ಕಾರ್ಯಕ್ರಮ ಅನುಷ್ಠಾನ ಮಾಡಲಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಸರ್ಕಾರದ ಮತ್ತು ಖಾಸಗಿ ತರಬೇತಿ ಕೇಂದ್ರಗಳ ಬಗ್ಗೆ ಮಾಹಿತಿ ನೀಡಬೇಕು. ಸಂಕಲ್ಪ ಯೋಜನೆಯಡಿ ವೃತ್ತಿ ತರಬೇತಿಯಲ್ಲಿ ಪ್ರಮಾಣೀಕೃತ ಅರ್ಹ ಫಲಾನುಭವಿಗಳಿಗೆ ಟೂಲ್ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ತಾಲ್ಲೂಕುವಾರು ಎಷ್ಟು ಪದವಿ ಕಾಲೇಜುಗಳಿವೆ? ಪ್ರತಿ ವರ್ಷ ಪದವಿ ಮುಗಿಸಿ ಎಷ್ಟು ವಿದ್ಯಾರ್ಥಿಗಳು ಹೊರ ಬರುತ್ತಿದ್ದಾರೆ ಎಂಬ ಮಾಹಿತಿ ಹಾಗೂ ಜಿಲ್ಲೆಯಲ್ಲಿ ಎಷ್ಟು ಫಲಾನುಭವಿಗಳು ಯುವನಿಧಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಒದಗಿಸುವಂತೆ ಸೂಚನೆ ನೀಡಿದರು.

ತರಬೇತಿ ಸಂಸ್ಥೆಗಳನ್ನು ಬಳಸಿಕೊಂಡು ಯುವ ಜನತೆಗೆ ಪರಿಣಾಮಕಾರಿಯಾಗಿ ತರಬೇತಿ ನೀಡುವ ಮೂಲಕ ಕೌಶಲ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಫಲಾನುಭವಿಗಳು ಕೌಶಲ ತರಬೇತಿ ಪಡೆಯಲು ಅರಿವು ಮೂಡಿಸಬೇಕು ಎಂದು ಹೇಳಿದರು.

ವಂದೇ ಭಾರತ್ ಎಕ್ಸ್ಪ್ರೆಸ್ ರೈಲ್ವೆ ಯೋಜನೆಯಡಿ ನಡೆಯುತ್ತಿರುವ 66 ಕೆ.ವಿ.ವಿದ್ಯುತ್ ಮಾರ್ಗದಡಿಯಲ್ಲಿ ಬರುವ ಟವರ್, ಕಾರಿಡಾರ್ ಕಾಮಗಾರಿಯು ಕಂದಲಿಯ ಯಗಚಿ ವಿದ್ಯಾಪೀಠದ ಮೂಲಕ ಹಾದು ಹೋಗಿದ್ದು, ಕೌಶಲಾಭಿವೃದ್ಧಿ ಇಲಾಖೆಗೆ ಸೇರಿದ ಜಾಗಕ್ಕೆ ಭೂ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಕಾರಾಗೃಹದಲ್ಲಿ ದಾಖಲಿರುವ ಬಂದಿಗಳಿಗೆ ಆನ್ಲೈನ್ ಮೂಲಕ ಪಶು ಸಂಗೋಪನೆ, ಕುರಿ ಕೋಳಿ ಸಾಕಾಣಿಕೆ, ಅಣಬೆ ಬೇಸಾಯ ಕುರಿತು ತರಬೇತಿ ನೀಡಬೇಕು. ಜಿಲ್ಲೆಯ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ‘ನನ್ನ ವೃತ್ತಿ ನನ್ನ ಆಯ್ಕೆ’ ಯೋಜನೆಯಡಿ ಶಾಲೆಗಳಲ್ಲಿ ಜಾಗೃತಿ ಮೂಡಿಸಲು ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಾಬು, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-36-18823367

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.