ಹಾಸನ: ಬೋವಿ ಸಮುದಾಯದ ಪಾರಂಪರಿಕ ಉದ್ಯೋಗವಾದ ಕಲ್ಲು ಗಣಿಗಾರಿಕೆ ಪುನರಾರಂಭಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ 15ನೇ ದಿನಕ್ಕೆ ಕಾಲಿಟ್ಟಿದೆ.

ಧರಣಿಯಲ್ಲಿ ಭಾಗವಹಿಸಿದ ಗ್ರಾಮಸ್ಥರು ಮಾತನಾಡಿ, ಕಲ್ಲು ಒಡೆಯುವುದು ತಮ್ಮ ಕುಲಕಸುಬಾಗಿದ್ದು, ಈ ಕೆಲಸ ಸ್ಥಗಿತಗೊಂಡ ಪರಿಣಾಮ ನೂರಾರು ಕುಟುಂಬಗಳ ಜೀವನ ಸಂಕಷ್ಟಕ್ಕೆ ಸಿಲುಕಿವೆ. ತಕ್ಷಣವೇ ಗಣಿಗಾರಿಕೆ ಪುನರಾರಂಭಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಆಲೂರು ತಾಲ್ಲೂಕಿನ ವೈ.ಎನ್.ಪುರ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಾಸವಾಗಿರುವ ಸುಮಾರು 250 ರಿಂದ 300 ಮಂದಿ ಬೋವಿ ಸಮುದಾಯದವರು ಮಗ್ಗೆ ಗ್ರಾಮದ ಸರ್ವೆ ನಂ.151ರ ಸರ್ಕಾರಿ ಗೋಮಾಳದ 3 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಉದ್ಯೋಗವು ಕೇವಲ ಬದುಕಿನ ಮಾರ್ಗವಷ್ಟೇ ಅಲ್ಲದೇ, ಪೀಳಿಗೆಗಳಿಂದ ಬಂದಿರುವ ಪಾರಂಪರಿಕ ಕುಲಕಸುಬಾಗಿದೆ ಎಂದು ವಿವರಿಸಿದರು.

20 ವರ್ಷಗಳಿಂದ ಗುತ್ತಿಗೆ ಪಡೆದು ಸುಮಾರು 60ರಿಂದ 70 ಮಂದಿ ಕಾರ್ಮಿಕರು ಸುತ್ತಿಗೆ, ಹುಳಿ, ಚಮಟಿ ಮುಂತಾದ ಉಪಕರಣಗಳನ್ನು ಬಳಸಿ ಕಲ್ಲು ಒಡೆದು ಜೀವನ ನಡೆಸುತ್ತಿದ್ದಾರೆ. ಸುಮಾರು 200ರಿಂದ 250 ಜನರು, ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ನಿತ್ಯದ ಬದುಕು ಇದೇ ಉದ್ಯೋಗದ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದರು.

ತಮ್ಮ ಮೇಲೆ ಸುಳ್ಳು ಆರೋಪ ಮಾಡಿ ಗಣಿಗಾರಿಕೆಗೆ ಅಡ್ಡಿಪಡಿಸಲಾಗುತ್ತಿದೆ. ಈಗಾಗಲೇ ನಡೆದ ತನಿಖೆಯಲ್ಲಿ ಯಾವುದೇ ತಪ್ಪಿಲ್ಲವೆಂದು ದೃಢಪಟ್ಟಿದ್ದರೂ ಮರು ವರದಿ ಕೇಳುವುದು ಅನವಶ್ಯಕ. ನಾವು ಸ್ವಾವಲಂಬಿಯಾಗಿ ಬದುಕಲು ಈ ಉದ್ಯೋಗ ಅವಲಂಬಿಸಿದ್ದೇವೆ. ಆದರೆ ನಿರಂತರ ಅಡ್ಡಿಪಡಿಸುವಿಕೆಯಿಂದ ನಮ್ಮ ಜೀವನ ಅಸ್ಥಿರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸೇತುರಾಮು, ಲತಾ, ಕಲ್ಲು ಕುಟಕರ ಸಂಘದ ಮಹಾದೇವ್, ನಂದೀಶ್, ಆರ್ಮುಗ, ಸರೋಜ, ಅಂಬಿಕಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-36-2005017141

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.