ಹಾಸನ: ‘ಮಹಿಳೆಯರ ಆರೋಗ್ಯವು ಕುಟುಂಬದ ಹಾಗೂ ಸಮಾಜದ ಆರೋಗ್ಯದ ಆಧಾರವಾಗಿದೆ. ಮಹಿಳೆಯರಲ್ಲಿ ಕಂಡುಬರುವ ರೋಗ ಲಕ್ಷಣಗಳ ಬಗ್ಗೆ ತಾತ್ಸಾರ ಮಾಡದೇ, ತಕ್ಷಣ ತಜ್ಞ ವೈದ್ಯರಿಂದ ತಪಾಸಣೆ ಮಾಡಿಸಿಕೊಂಡು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು’ ಎಂದು ಹಾಸನ ಜಿಲ್ಲಾ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ ಸಂಘದ ಅಧ್ಯಕ್ಷೆ ಡಾ. ವಿಶಾಲಾಕ್ಷಿ ತಿಳಿಸಿದರು.

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘ, ಚಾಮರಾಜೇಂದ್ರ ಜಿಲ್ಲಾ ಆಸ್ಪತ್ರೆ ಹಾಗೂ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ, ಹಿಮ್ಸ್ ಪ್ರಸೂತಿ ಮತ್ತು ಸ್ತ್ರೀ ರೋಗ ಚಿಕಿತ್ಸಾ ವಿಭಾಗ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಹಭಾಗಿತ್ವದಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಸೂತಿ ಮತ್ತು ಸ್ತ್ರೀರೋಗ ಚಿಕಿತ್ಸಾ ವಿಭಾಗದಲ್ಲಿ ಏರ್ಪಡಿಸಿದ್ದ ಗರ್ಭಕೋಶ ಹಾಗೂ ಗರ್ಭಕಂಠದ ಕ್ಯಾನ್ಸರ್ ಇತಿಹಾಸ ಹೊಂದಿರುವ ಪ್ಯಾಲಿಯೇಟಿವ್ ಕೇರ್ ಕಾರ್ಯಕ್ರಮದ ಫಲಾನುಭವಿಗಳ ಕುಟುಂಬದ ಆಯ್ದ 50 ಮಹಿಳೆಯರಿಗಾಗಿ ಏರ್ಪಡಿಸಿದ್ದ ಎಚ್ಪಿವಿ, ಡಿಎನ್ಎ ಮತ್ತು ಪ್ಯಾಪ್ ಸ್ಮೀಯರ್ ಪರೀಕ್ಷೆ ಮತ್ತು ಕ್ಯಾನ್ಸರ್ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾರಂಭಿಕ ಹಂತದಲ್ಲಿ ರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ರೋಗ ಉಲ್ಬಣ ಆಗುವುದನ್ನು ತಡೆಗಟ್ಟಬಹುದು. ಇತ್ತೀಚಿನ ದಿನಗಳಲ್ಲಿ ಕೆಲವು ಮಹಿಳೆಯರಲ್ಲಿ ಗರ್ಭಕೋಶ ಹಾಗೂ ಗರ್ಭಕಂಠದ ಕ್ಯಾನ್ಸರ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಒಂದು ಗಂಭೀರ ಆರೋಗ್ಯ ಸಮಸ್ಯೆಯಾಗಿದೆ ಎಂದರು.

ಸಂತೋಷದ ವಿಷಯ ಎಂದರೆ, ಎಚ್ಪಿವಿ, ಡಿಎನ್ಎ ಮತ್ತು ಪ್ಯಾಪ್ ಸ್ಮಿಯರ್ ಪರೀಕ್ಷೆ ಮೂಲಕ ಗರ್ಭಕೋಶ ಹಾಗೂ ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆಹಚ್ಚಿ ತಡೆಗಟ್ಟಲು ಸಾಧ್ಯವಾಗಿದೆ. ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಆರೋಗ್ಯವಂತರಾಗಿ ಬದುಕುವಂತೆ ತಿಳಿಸಿದರು.

ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥೆಯ ಅಧ್ಯಕ್ಷ ಡಾ. ಸುಧೀರ್ ಬಿ. ಬೆಂಗಳೂರ ಮಾತನಾಡಿ, ಹಿಮ್ಸ್ ಹಾಗೂ ಎಸ್ವಿವೈಎಂ ಸಂಸ್ಥೆಯ ಸಹಭಾಗಿತ್ವದಲ್ಲಿ 8 ವರ್ಷಗಳಿಂದ ಮನೆ ಆಧಾರಿತ ಉಪಶಮನ ಆರೈಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಸ್ತ್ರೀ ರೋಗ ತಜ್ಞರಾದ ಡಾ.ಭಾರತಿ ರಾಜಶೇಖರ್ ಮತ್ತು ಡಾ.ಪ್ರೇಮಲತಾ ಎಚ್.ಎಲ್., ಮಹಿಳೆಯರೊಂದಿಗೆ ಸಂವಾದ ನಡೆಸಿದರು. ಮಹಿಳೆಯರಲ್ಲಿ ಅನಿಯಮಿತ ರಕ್ತಸ್ರಾವ, ಬಿಳಿ ಸ್ರಾವ ಹೆಚ್ಚಾಗುವುದು, ಕೆಳ ಹೊಟ್ಟೆ ಅಥವಾ ಬೆನ್ನು ನೋವು, ಇತ್ಯಾದಿ ಲಕ್ಷಣಗಳು ತುಂಬ ದಿನಗಳಿಂದ ಕಂಡು ಬಂದರೆ ಕೂಡಲೆ ತಜ್ಞ ವೈದ್ಯರಿಂದ ತಪಾಸಣೆ ಮತ್ತು ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಸಾವಿತ್ರಿ ಎ., ಡಾ.ಪೂರ್ಣಿಮಾ, ಹಿಮ್ಸ್ ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗದ ವೈದ್ಯರಾದ ಡಾ.ರಘುಪತಿ, ಡಾ.ರಂಜಿತ, ಡಾ.ಅನುಪಮಾ ಹಾಗೂ ಕ್ಯಾನ್ಸರ್ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ, ಎಸ್ವಿವೈಎಂ ಹಾಸನ ಶಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-36-1882213334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.