ಹಾಸನ: ‘ಜನಗಣತಿಗಾಗಿ ಜಿಲ್ಲೆಯಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಆಡಳಿತಾತ್ಮಕ ಮಟ್ಟದಲ್ಲಿ ತರಬೇತಿ, ಮಾನವ ಸಂಪನ್ಮೂಲ ನಿಯೋಜನೆ ಹಾಗೂ ತಾಂತ್ರಿಕ ರೂಪುರೇಷೆಗಳನ್ನು ಯಶಸ್ವಿಯಾಗಿ ರೂಪಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ತಿಳಿಸಿದರು.

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜನಗಣತಿ ಕಾರ್ಯದ ಪೂರ್ವ ಸಿದ್ಧತೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ 26 ಚಾರ್ಜ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಮಾರ್ಚ್ 9ರಿಂದ 11ರವರೆಗೆ ಜಿಲ್ಲಾಮಟ್ಟದ ಅಧಿಕಾರಿಗಳು, ವಿಷಯ ನಿರ್ವಾಹಕರು ಹಾಗೂ ತಾಂತ್ರಿಕ ಸಹಾಯಕರಿಗೆ ವಿಶೇಷ ತರಬೇತಿ ಕಾರ್ಯಕ್ರಮ ನಡೆಸಲಾಗಿದೆ’ ಎಂದರು.

‘ಫೆ.24ರಿಂದ 27ರವರೆಗೆ ಮೈಸೂರು ಎಟಿಐನಲ್ಲಿ ಪ್ರಧಾನ ತರಬೇತಿದಾರರಿಗೆ (ಮಾಸ್ಟರ್ ಟ್ರೈನರ್ಸ್) ತರಬೇತಿ ನೀಡಲಾಗಿದ್ದು, ನಂತರ ಜಿಲ್ಲಾಮಟ್ಟದಲ್ಲಿ 78 ಫೀಲ್ಡ್ ಟ್ರೈನರ್ಗಳಿಗೆ ಮಾರ್ಚ್ 16ರಿಂದ 20ರವರೆಗೆ ಎರಡು ಹಂತಗಳಲ್ಲಿ ತರಬೇತಿ ಯಶಸ್ವಿಯಾಗಿ ಪೂರ್ಣಗೊಂಡಿದೆ’ ಎಂದು ವಿವರಿಸಿದರು.

‘ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಗಣತಿ ಬ್ಲಾಕ್ಗಳನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 4,271 ಗಣತಿ ಬ್ಲಾಕ್ಗಳನ್ನು ರಚಿಸಲಾಗಿದೆ. ಈ ಕಾರ್ಯಕ್ಕಾಗಿ 3,969 ಗಣತಿದಾರರು ಮತ್ತು 734 ಮೇಲ್ವಿಚಾರಕರನ್ನು ಸಿಎಂಎಂಎಸ್ ಪೋರ್ಟಲ್ ಮೂಲಕ ನೇಮಕ ಮಾಡಲಾಗಿದೆ’ ಎಂದು ತಿಳಿಸಿದರು.

‘ವಿಶೇಷ ಗಮನದ ಭಾಗವಾಗಿ, ಸಕಲೇಶಪುರ ತಾಲ್ಲೂಕಿನ ಬಸವನಹಳ್ಳಿ ಹಾಗೂ ಹಾಸನ ತಾಲ್ಲೂಕಿನ ಕಂಚಮಾರನಹಳ್ಳಿ ಗ್ರಾಮಗಳನ್ನು ಮಿಲಿಟರಿ ಕ್ಯಾಂಪ್ಗಳ ವಿಶೇಷ ನಿಯೋಜನೆಯಾಗಿ ಗುರುತಿಸಲಾಗಿದೆ. ಜೊತೆಗೆ ಜಿಲ್ಲೆಯಲ್ಲಿ 43 ಎಸ್ಆರ್ಎಸ್ (ಸ್ಯಾಂಪಲ್ ರಿಜಿಸ್ಟ್ರೇಷನ್ ಸಿಸ್ಟಮ್) ಗ್ರಾಮಗಳು ಹಾಗೂ 105 ಸ್ಲಂ ಬ್ಲಾಕ್ಗಳಿದ್ದು, ಈ ಪ್ರದೇಶಗಳ ಮೇಲೂ ವಿಶೇಷ ಕಾಳಜಿ ವಹಿಸಲಾಗುತ್ತಿದೆ’ ಎಂದು ಹೇಳಿದರು.

‘ಜನಗಣತಿ ಪ್ರಕ್ರಿಯೆ ರಾಷ್ಟ್ರೀಯ ಕೀರ್ತಿ, ದೇಶದ ಅಭಿವೃದ್ಧಿಗೆ ಅಗತ್ಯವಾದ ಮಾಹಿತಿ ಒದಗಿಸುವ ಮಹತ್ವದ ಕಾರ್ಯವಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ನಾಗರಿಕರೂ ಸ್ವಯಂಪ್ರೇರಿತವಾಗಿ ಗಣತಿಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಸ್ವಯಂ ಗಣತಿ ಹೇಗೆ?: ಕೇಂದ್ರ ಗೃಹ ಸಚಿವಾಲಯ 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲು ಉದ್ದೇಶಿಸಿದೆ. ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿಯಲ್ಲಿ ಮೊದಲ 15 ದಿನ se.census.gov.in ಜಾಲತಾಣದ ಮೂಲಕ ಸ್ವಯಂ ಗಣತಿಗೆ ಅವಕಾಶವಿದೆ’ ಎಂದರು.

‘ಮನೆಯ ಯಾವುದೇ ಒಬ್ಬ ಸದಸ್ಯರು 15ರಿಂದ 20 ನಿಮಿಷಗಳ ಅವಧಿಯಲ್ಲಿ ಸ್ವಯಂ ಗಣತಿ ಮಾಡಿ, ಮನೆಯ ವಿವರಗಳನ್ನು ಒದಗಿಸಬಹುದು. ಮೊಬೈಲ್ ಫೋನ್, ಇಮೇಲ್ನಲ್ಲಿ ಸ್ವಯಂ-ಗಣತಿ ಐಡಿ ಪಡೆಯಬಹುದಾಗಿದೆ. ಗಣತಿದಾರರು ಮನೆಗೆ ಭೇಟಿ ನೀಡಿದಾಗ, ದೃಢೀಕರಿಸಲು ಮತ್ತು ಸ್ವಯಂ ಗಣತಿ ದತ್ತಾಂಶದ ಅಂತಿಮ ಸಲ್ಲಿಕೆಗಾಗಿ ಗಣತಿ ಐಡಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕು. ಇದು ಸರಳವಾಗಿದ್ದು, ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-36-1050234070

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.