ಹಾಸನ: ಪ್ರಕೃತಿಯನ್ನು ಉಳಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಮನೆ ಸುತ್ತ ಗಿಡಗಳನ್ನು ಬೆಳೆಸುತ್ತಾ ಪ್ರಕೃತಿಯನ್ನು ಉಳಿಸಿ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಭಾಸ್ಕರ್ ತಿಳಿಸಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಾನಗರ ಪಾಲಿಕೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಪರಿಸರದ ಬಗ್ಗೆ ಅರಿವು ಮೂಡಿಸಲು ಆಯೋಜಿಸಿದ್ದ ಬೀದಿ ನಾಟಕ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಕೃತಿಯಿಂದ ಹಲವಾರು ಮೂಲಸೌಕರ್ಯ ದೊರಕುತ್ತದೆ. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವುದು ನಮ್ಮ ಮೊದಲ ಕರ್ತವ್ಯ. ವಾಹನಗಳು ಮತ್ತು ಕೈಗಾರಿಕೆಗಳಿಂದ ಬಿಡುಗಡೆಯಗುವ ವಿಷಕಾರಿ ಮಾಲಿನ್ಯದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ವಾಯುಗುಣಮಟ್ಟ ಕುಸಿಯುತ್ತದೆ. ವಾಯು ಮಾಲಿನ್ಯವು ಇಂದು ಜಗತ್ತು ಎದುರಿಸುತ್ತಿರುವ ಅತ್ಯಂತ ಗಂಭೀರ ಹಾಗೂ ಮಾರಕ ಸಮಸ್ಯೆಯಾಗಿದೆ ಎಂದರು.

ಪ್ಲಾಸ್ಟಿಕ್ ವಿಲೇವಾರಿ ಮಾಡುವ ಮೂಲಕ ಪರಿಸರ ಸಂರಕ್ಷಣೆ ಮಾಡೋಣ, ಪ್ಲಾಸ್ಟಿಕ್ ಅಥವಾ ಕಸವನ್ನು ಸುಡುವ ಬದಲು, ಅದನ್ನು ಮರುಬಳಕೆ ಮಾಡಿ ಅಥವಾ ಸ್ಥಳೀಯ ಸಂಸ್ಥೆಗಳ ಮೂಲಕ ವಿಲೇವಾರಿ ಮಾಡಿ ಪರಿಸರ ಸಂರಕ್ಷಣೆ ಮಾಡಬೇಕು ಎಂದರು.

ಕಲಾವಿದ ಬಿ.ಟಿ ಮಾನವ, ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-36-574763749

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.