ಹಾಸನ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಹಾಸನ ಜಿಲ್ಲೆಯಲ್ಲಿ ‘ಸಾಂಸ್ಕೃತಿಕ ಸೌರಭ‘, ‘ಯುವ ಸೌರಭ’ ಮತ್ತು ‘ಚಿಗುರು’ ಕಾರ್ಯಕ್ರಮಗಳನ್ನು ಆಯೋಜಿಸಲು ಪ್ರತಿಭಾವಂತ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ನಿರ್ದೇಶಕ ತಾರಾನಾಥ್ ತಿಳಿಸಿದ್ದಾರೆ.

ಸಾಂಸ್ಕೃತಿಕ ಸೌರಭ: ಆಕಾಶವಾಣಿಯ ಬಿ-ಹೈ, ಎ ಗ್ರೇಡ್ ಕಲಾವಿದರು ಹಾಗೂ ಸರ್ಕಾರಿ ಪ್ರಶಸ್ತಿ ಪುರಸ್ಕೃತ ಕಲಾವಿದರು ಮಾತ್ರ ಅರ್ಜಿ ಸಲ್ಲಿಸಬಹುದು. ಶಾಸ್ತ್ರೀಯ ಸಂಗೀತ, ಕರ್ನಾಟಕ-ಹಿಂದೂಸ್ತಾನಿ ಗಾಯನ, ವಾದ್ಯ ಸಂಗೀತ, ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆ, ಸಮೂಹ ನೃತ್ಯ, ನೃತ್ಯ ರೂಪಕ, ಜನಪದ ಕಲೆ, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ, ಗಮಕ, ಕಥಾ ಕೀರ್ತನೆ ಕಲಾಪ್ರಕಾರಗಳು.

ಯುವ ಸೌರಭ: 15 ರಿಂದ 30 ವರ್ಷ ವಯೋಮಾನದ ಪ್ರತಿಭಾವಂತ ಯುವ ಕಲಾವಿದರು ಅರ್ಜಿ ಸಲ್ಲಿಸಬಹುದು. ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆ, ಸಮೂಹ ನೃತ್ಯ, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ.

ಚಿಗುರು:8 ರಿಂದ 14 ವರ್ಷ ವಯೋಮಾನದ ಪ್ರತಿಭಾವಂತ ಮಕ್ಕಳು ಅರ್ಜಿ ಸಲ್ಲಿಸಬಹುದು. ಶಾಸ್ತ್ರೀಯ ಸಂಗೀತ, ಗಾಯನ, ವಾದ್ಯ ಸಂಗೀತ, ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆ, ಸಮೂಹ ನೃತ್ಯ, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ, ಏಕಪಾತ್ರಾಭಿನಯ.

ಅರ್ಜಿಗಳನ್ನು ಜೂನ್ 26ರೊಳಗೆ ಅಗತ್ಯ ದಾಖಲೆಗಳೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 08172-267162 ಸಂಪರ್ಕಿಸ ಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-36-1166327883

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.