ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅರಕಲಗೂಡು | ಬ್ಯಾಟರಿ ಅಂಗಡಿಯಲ್ಲಿ ಕಳವು

Published 10 ಜುಲೈ 2024, 14:43 IST
Last Updated 10 ಜುಲೈ 2024, 14:43 IST
ಅಕ್ಷರ ಗಾತ್ರ

ಅರಕಲಗೂಡು: ಪಟ್ಟಣದ ಹಾಸನ ರಸ್ತೆಯ ಬ್ಯಾಟರಿ ಅಂಗಡಿಗೆ ಮಂಗಳವಾರ ರಾತ್ರಿ ನುಗ್ಗಿದ ಕಳ್ಳರು ಬ್ಯಾಟರಿಗಳನ್ನು ಕಳವು ಮಾಡಿದ್ದಾರೆ.

ಸಂತೋಷ್ ಕುಮಾರ್ ಅವರ ಅಂಗಡಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮೂರು ಹೊಸ ಬ್ಯಾಟರಿ ಹಾಗೂ ಗ್ರಾಹಕರು ಚಾರ್ಜಿಂಗ್‌ಗಾಗಿ ನೀಡಿದ್ದ 8 ಬ್ಯಾಟರಿಗಳನ್ನು ಕಳವು ಮಾಡಿದ್ದಾರೆ. ದೇವರ ಹುಂಡಿಯಲ್ಲಿದ್ದ ₹6 ಸಾವಿರ ಹಾಗೂ ಗಲ್ಲಾಪೆಟ್ಟಿಗೆಯಲ್ಲಿದ್ದ ಒಂದು ಸಾವಿರ ನಗದನ್ನು ದೋಚಿದ್ದಾರೆ. ಈ ಕುರಿತು ಪಟ್ಟಣ ಠಾಣೆಗೆ ದೂರು ನೀಡಿರುವುದಾಗಿ ಸಂತೋಷ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT