ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ ಜಿಲ್ಲೆಯಲ್ಲಿ ಶೇ 65.64 ಮತದಾನ

Last Updated 13 ಜೂನ್ 2022, 11:10 IST
ಅಕ್ಷರ ಗಾತ್ರ

ಹಾಸನ: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಮತದಾನ ಬಿರುಸಿನಿಂದ ನಡೆದಿದ್ದು, ಸಂಜೆ 4 ಗಂಟೆಯವರೆಗೆ ಶೇ 65.64 ರಷ್ಟು ಮತದಾನವಾಗಿದೆ. ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಬೆಳಿಗ್ಗೆ ನಿಧಾನಗತಿಯಲ್ಲಿ ಶುರುವಾಗಿದ್ದ ಮತದಾನ ಮಧ್ಯಾಹ್ನದ ವೇಳೆಗೆ ಚುರುಕಾಗಿತ್ತು. ಮಧ್ಯಾಹ್ನ 2 ಗಂಟೆಗೆ ಶೇ 44 ರಷ್ಟು ಮತದಾನವಾಗಿತ್ತು.

ಇದುವರೆಗೆ ಆಲೂರು ತಾಲ್ಲೂಕಿನ ಗರಿಷ್ಠ ಶೇ 77, ಅರಸೀಕೆರೆ ತಾಲ್ಲೂಕಿನಲ್ಲಿ ಶೇ 71, ಹೊಳೆನರಸೀಪುರ ತಾಲ್ಲೂಕಿನಲ್ಲಿ ಶೇ 69, ಬೇಲೂರು ಶೇ 67.62, ಅರಕಲಗೂಡು ಶೇ 66.70, ಚನ್ನರಾಯಪಟ್ಟಣ ಶೇ 64.39, ಸಕಲೇಶಪುರ ಶೇ 63.15 ಹಾಗೂ ಹಾಸನ ತಾಲ್ಲೂಕಿನಲ್ಲಿ ಶೇ 62 ರಷ್ಟು ಮತದಾನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT