ಹಾಸನ: ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೇ ಶಿಕ್ಷಣದಿಂದ ವಂಚಿತರಾಗುವಂತಾಗಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿಯಿಂದ ಪ್ರತಿಭಟನಾ ಮೆರವಣಿಯಲ್ಲಿ ಸಾಗಿದ ವಿದ್ಯಾರ್ಥಿಗಳು, ಆರ್.ಸಿ. ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು, ಧರಣಿ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ಗೋಪಿ ರಂಗಸ್ವಾಮಿ ಮಾತನಾಡಿ, ಉನ್ನತ ಶಿಕ್ಷಣದ ಆಸೆ ಹೊಂದಿರುವ ಅನೇಕ ಬಡ ವಿದ್ಯಾರ್ಥಿಗಳು ಸರ್ಕಾರದಿಂದ ಆರ್ಥಿಕ ನೆರವು ಸಿಗಲಿದೆ ಎಂಬ ನಿರೀಕ್ಷೆಯೊಂದಿಗೆ ಕಾಲೇಜುಗಳಿಗೆ ಸೇರುತ್ತಿದ್ದಾರೆ. ಆದರೆ ಸರ್ಕಾರ ವಿದ್ಯಾರ್ಥಿವೇತನ ವಿತರಣೆಗೆ ವಿಳಂಬ ಮಾಡುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿದರು.

ಎಸ್ಎಸ್ಪಿ (ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್) ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳಡಿ ಲಕ್ಷಾಂತರ ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೂ ಸಮಯಕ್ಕೆ ವಿದ್ಯಾರ್ಥಿವೇತನ ಮಂಜೂರಾಗದೆ ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ದೂರಿದರು.

ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ‘ರೈತ ವಿದ್ಯಾನಿಧಿ’ ವಿದ್ಯಾರ್ಥಿವೇತನ ತಡೆಹಿಡಿಯಲಾಗಿದೆ. ಇದರಿಂದ ರೈತರ ಮಕ್ಕಳು ತೊಂದರೆ ಅನುಭವಿಸುವಂತಾಗಿದೆ ಎಂದರು.

ರಾಜ್ಯದಲ್ಲಿ 2024-25ನೇ ಸಾಲಿನ ಸುಮಾರು 4 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮಂಜೂರಾದ ವಿದ್ಯಾರ್ಥಿ ವೇತನ ಇನ್ನೂ ಖಾತೆಗೆ ಜಮೆಯಾಗಿಲ್ಲ. ಎಸ್ಎಸ್ಪಿ ಪೋರ್ಟಲ್ನಲ್ಲಿ ಮಂಜೂರಾಗಿದೆ ಎಂದು ತೋರಿದರೂ, ಹಣ ವರ್ಗಾವಣೆ ಆಗದೆ ಗೊಂದಲಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

ಬಾಕಿ ಇರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಎಸ್ಎಸ್ಪಿ ಪೋರ್ಟಲ್ನ ತಾಂತ್ರಿಕ ದೋಷ ಸರಿಪಡಿಸಬೇಕು. ವಿದ್ಯಾರ್ಥಿವೇತನ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡುವುದನ್ನು ನಿಲ್ಲಿಸಬೇಕು. ಹೊಸ ಅರ್ಜಿ ಆಹ್ವಾನಿಸುವ ಮೊದಲು ಹಳೆಯ ಬಾಕಿ ಪಾವತಿಸಬೇಕು. ಪ್ರತಿ ಜಿಲ್ಲಾ ಕೇಂದ್ರದಲ್ಲಿ ತಾಂತ್ರಿಕ ಸಹಾಯ ಕೌಂಟರ್ಗಳನ್ನು ಆರಂಭಿಸಿ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಮತಾ, ವಿಭಾಗ ಸಂಘಟಕ ರವಿ, ವರ್ಷಿಣಿ, ಪ್ರಭಾತ್, ಚೇತನ್, ಸಿದ್ದು ಉಪ್ಪಾರ್, ವಂದನಾ, ವಿವಿಧ ಕಾಲೇಜು ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.