ಹಾಸನ: ಅಕ್ಕ ಪಡೆ ಯೋಜನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಆವರಣದಲ್ಲಿ ಚಾಲನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ, ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ಹಾಗೂ ನೆರವು ನೀಡುವ ಉದ್ದೇಶದ ಯೋಜನೆ ಇದಾಗಿದೆ. ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆಯ ಪ್ರಾಥಮಿಕ ಉದ್ದೇಶ ಎಂದು ತಿಳಿಸಿದರು.

ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕ ಪಡೆ, ಸಮಾಜದಲ್ಲಿ ಸ್ಪಂದಿಸುವ ಸುರಕ್ಷಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ಅಕ್ಕ ಪಡೆ ಉದ್ದೇಶ: ದೌರ್ಜನ್ಯ ಹಿಂಸೆ ನಿರ್ಲಕ್ಷ್ಯ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಮತ್ತು ರಕ್ಷಣೆ ಒದಗಿಸುವುದು, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಘನತೆ ಮತ್ತು ಸಬಲೀಕರಣವನ್ನು ಉತ್ತೇಜಿಸುವುದು, ಶಿಕ್ಷಣದ ಮೂಲಕ ಹಕ್ಕುಗಳು, ಕಾನೂನುಗಳು, ಸುರಕ್ಷತಾ ಕ್ರಮಗಳು ಮತ್ತು ಲಭ್ಯವಿರುವ ಬೆಂಬಲ ವ್ಯವಸ್ಥೆಗಳ ಬಗ್ಗೆ ಜಾಗೃತಿ ಮೂಡಿಸುವುದು, ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು ಕಾನೂನಿನ ರಕ್ಷಣೆಯೊಂದಿಗೆ ಭಯಮುಕ್ತ ವಾತಾವರಣ ಸೃಷ್ಟಿಸುವುದು ಇದರ ಉದ್ದೇಶ.

ಪೋಕ್ಸೊ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ, ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಣೆ, ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು, ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವುದು, ಸಹಾಯವಾಣಿಗಳಾದ 1098, 181, 112 ಇತ್ಯಾದಿ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಿದೆ.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಧರಣಿ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲೀಪ್ ಉಪಸ್ಥಿತರಿದ್ದರು.

ಅಕ್ಕ ಪಡೆ

ಜಿಲ್ಲಾ ಮಟ್ಟದಲ್ಲಿ ಮಹಿಳಾ ಗೃಹ ರಕ್ಷಕರನ್ನು ಒಳಗೊಂಡ ‘ಅಕ್ಕ ಪಡೆ’ ತಂಡವು ಸ್ಥಳೀಯ ಪೊಲೀಸರ ಸಹಯೋಗದೊಂದಿಗೆ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಎರಡು ಪಾಳಿಗಳಲ್ಲಿ ಕಾರ್ಯ ನಿರ್ವಹಿಸುತ್ತದೆ.

ತಂಡವು ಶಾಲೆ–ಕಾಲೇಜು ಬಾಲಕಿಯರ ಮಹಿಳಾ ಹಾಸ್ಟೆಲ್ ಬಸ್ ರೈಲ್ವೆ ನಿಲ್ದಾಣಗಳು ಸ್ಥಳೀಯ ಮಾರುಕಟ್ಟೆ ಪ್ರೇಕ್ಷಣೀಯ ಸ್ಥಳಗಳು ಪವಿತ್ರ ಸ್ಥಳಗಳು ಮತ್ತು ಇತರೆ ಸೂಕ್ಷ್ಮ ಸ್ಥಳಗಳಲ್ಲಿ ಕಾರ್ಯನಿರ್ವಹಿಸಲಿದೆ. ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.