ಹಾಸನ: ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಕಾರ್ಮಿಕ ಸೇವಾ ಕೇಂದ್ರವನ್ನು ಇಲ್ಲಿನ ವಿದ್ಯಾನಗರದ ಗೌರಿಕೊಪ್ಪಲು ಬಡಾವಣೆಯ ಎಸ್ಬಿಐ ಬ್ಯಾಂಕ್ನ ಮೇಲ್ಮಹಡಿಯಲ್ಲಿ ಆರಂಭಿಸಲಾಗಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ, ಗುರುತಿನ ಚೀಟಿ ನವೀಕರಣ ಮತ್ತು ಮಂಡಳಿಯಿಂದ ನೀಡುವ ವಿವಿಧ ಸೌಲಭ್ಯಗಳಾದ ಶೈಕ್ಷಣಿಕ ಧನ ಸಹಾಯ, ಮದುವೆ ಧನ ಸಹಾಯ, ಪ್ರಮುಖ ವೈದ್ಯಕೀಯ ಧನ ಸಹಾಯ, ವೈದ್ಯಕೀಯ ಧನ ಸಹಾಯ, ಹೆರಿಗೆ ಧನ ಸಹಾಯ, ತಾಯಿ– ಮಗು ಸಹಾಯ ಹಸ್ತ, ಪಿಂಚಣಿ, ಅಪಘಾತ ಮರಣ ಧನ ಸಹಾಯ, ಅಂತ್ಯಕ್ರಿಯೆ ವೆಚ್ಚ, ಕುಟುಂಬ ಪಿಂಚಣಿ, ದುರ್ಬಲತೆ ಪಿಂಚಣಿ ಅರ್ಜಿಗಳನ್ನು ಸಲ್ಲಿಸಲು ಕಾರ್ಮಿಕ ಸೇವಾ ಕೇಂದ್ರಕ್ಕೆ ಭೇಟಿ ನೀಡಬಹುದು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಾಗಿ ನೋಂದಣಿಯಾಗಲು ₹50, ಗುರುತಿನ ಚೀಟಿಯ ಸ್ಮಾರ್ಟ್ ಕಾರ್ಡ್ ಪಡೆಯಲು ₹50 ಶುಲ್ಕ ಮತ್ತು ಗುರುತಿನ ಚೀಟಿ ನವೀಕರಣಕ್ಕೆ ₹50 ಶುಲ್ಕವಿರುತ್ತದೆ. ಧನಸಹಾಯದ ಅರ್ಜಿಯನ್ನು ಯಾವುದೇ ಶುಲ್ಕವಿಲ್ಲದೇ ಕಾರ್ಮಿಕ ಸೇವಾ ಕೇಂದ್ರದಲ್ಲಿ ಸಲ್ಲಿಸಬಹುದು. ಮಾಹಿತಿಗೆ ಮೊ.ಸಂ. 9035954161, 9035954160 ಗೆ ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ಯಮುನಾ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-36-1234270036

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.