ಹಾಸನ: ‘ಸಕಲೇಶಪುರ ತಾಲ್ಲೂಕಿನ ಯಸಳೂರು ಹೋಬಳಿಯ ಕರಗೂರು ಕೂಡಿಗೆ (ಪಾಲಹಳ್ಳಿ) ಗ್ರಾಮದಲ್ಲಿ ವಾಯುಪುತ್ರ ಸೇವಾ ಸಮಿತಿ ವತಿಯಿಂದ ಆಂಜನೇಯ ಸ್ವಾಮಿಯ 16 ಅಡಿ ಎತ್ತರದ ಏಕಶಿಲಾ ವಿಗ್ರಹದ ಪ್ರತಿಷ್ಠಾಪನಾ ಮಹೋತ್ಸವವನ್ನು ಏ. 2ರಿಂದ4 ರವರೆಗೆ ಹಮ್ಮಿಕೊಳ್ಳಲಾಗಿದೆ’ ಎಂದು ಸಮಿತಿಯ ಅಧ್ಯಕ್ಷ ಬಿ.ಎಸ್. ತೇಜಸ್ವಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಂಜುನಾಥ ಶರ್ಮಾ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದ್ದು, ಏ. 2ರಂದು ಬೆಳಿಗ್ಗೆ ಗಣಪತಿ ಪೂಜೆ, ಪುಣ್ಯಾಹ, ಮಹಾಸಂಕಲ್ಪ ಸೇರಿದಂತೆ ನಾನಾ ಪೂಜೆ ನಡೆಯಲಿವೆ. ಸಂಜೆ ಪಂಚಗವ್ಯ ಹೋಮ, ವಾಸ್ತು ಹೋಮ ಸೇರಿದಂತೆ ವಿವಿಧ ಹೋಮಗಳು ನೆರವೇರಲಿವೆ. ದಾನಿಗಳು ಹಾಗೂ ಗ್ರಾಮಸ್ಥರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಬಳಿಕ ಕೆ.ಆರ್. ಪೇಟೆಯ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಮತ್ತು ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

3ರಂದು ಬೆಳಿಗ್ಗೆ 108 ಸುಮಂಗಲಿಯರೊಂದಿಗೆ ಗಂಗಾ ಕಳಸ ಪ್ರವೇಶ, ವೇದ ಪಾರಾಯಣ, ಗೋಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ ಅಧಿವಾಸ ಪೂಜೆ, ಹೋಮಗಳು ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದ್ದು, ಪೊಳಲಿ ಬಂಟವಾಳದ ರಾಜರಾಜೇಶ್ವರಿ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ ಜರುಗಲಿದೆ ಎಂದರು.

‘4ರಂದು ಬೆಳಿಗ್ಗೆ ನೇತ್ರೋನ್ಮಿಲನ, ನಿರೀಕ್ಷಣಂ, ಅಭಿಷೇಕ, ಆಂಜನೇಯ ಗಾಯತ್ರಿ ಹೋಮ, ಪೂರ್ಣಾಹುತಿ ಹಾಗೂ ಮಹಾಮಂಗಳಾರತಿ ನೆರವೇರಲಿದ್ದು, ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಗುತ್ತದೆ. ಎರಡು ದಿನ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿದ್ದು, ಬೆಳಿಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ’ ಎಂದು ಹೇಳಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಬಿ.ಎಸ್. ತೇಜಸ್ವಿ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೆಗೌಡ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಸಂಸದ ಶ್ರೇಯಸ್ ಪಟೇಲ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ, ಮುಳುಗುತಜ್ಞ ಈಶ್ವರ ಮಲ್ಪೆ, ಆಸರೆ ಫೌಂಡೇಶನ್ನ ಜಯರಾಜ್ ನಾಯ್ಡು ಅವರನ್ನು ಗೌರವಿಸಲಾಗುವುದು ಎಂದರು.

ಆಂಜನೇಯ ಸ್ವಾಮಿಯ ಬೃಹತ್ 16 ಅಡಿ ಕಲ್ಲಿನ ಏಕಶಿಲಾ ವಿಗ್ರಹ ಜಿಲ್ಲೆಯಲ್ಲಿಯೇ ಪ್ರಥಮವಾಗಿದ್ದು, ಸುಮಾರು ₹1.5 ಕೋಟಿ ವೆಚ್ಚವಾಗಿದೆ. ಕರಗೂರು ಕೂಡಿಗೆ ಸೇರಿದಂತೆ ಸುತ್ತಲಿನ ಗ್ರಾಮ ಹಾಗೂ ಜಿಲ್ಲೆಯ ನಾನಾ ತಾಲ್ಲೂಕಿನ ದಾನಿಗಳು ಧನ ಸಹಾಯ ಮಾಡಿದ್ದಾರೆ. ಕಾರ್ಯಕ್ರಮಕ್ಕೂ ₹50 ಲಕ್ಷಕ್ಕೂ ಹೆಚ್ಚು ವೆಚ್ಚವಾಗಲಿದ್ದು, ಮೂರು ದಿನವೂ ಸಾರ್ವಜನಿಕರಿಗೆ ಬೆಳಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು.

ರಾಮಚಂದ್ರ, ಅಣ್ಣಯ್ಯ, ಜಯಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-36-1226664138

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.