ಹಾಸನ: ಬಿಜೆಪಿ ಮುಖಂಡ ದೇವರಾಜೇಗೌಡರನ್ನು ಕೂಡಲೇ ಬಂಧಿಸಿ ಹಾಸನ ಜಿಲ್ಲೆಯಿಂದ ಗಡೀಪಾರು ಮಾಡಬೇಕು ಎಂದು ಮಹಿಳಾ ಧ್ವನಿ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಅನ್ನಪೂರ್ಣಗೌಡ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರಾಜೇಗೌಡ ಹಲವು ಮಹಿಳೆಯರ ಮಾನ–ಮರ್ಯಾದೆಗೆ ಧಕ್ಕೆ ತರುವ ಹೇಳಿಕೆ ನೀಡುತ್ತಿದ್ದಾರೆ. ಮಹಿಳೆಯರ ಬಗ್ಗೆ ಅವಾಚ್ಯ ಪದ ಬಳಕೆ ಹಾಗೂ ವೈಯಕ್ತಿಕ ನಿಂದನೆಗಳನ್ನು ಸಹಿಸುವುದಿಲ್ಲ ಎಂದರು.

ಮಾರ್ಚ್ 7 ಮತ್ತು 8ರಂದು ನಡೆಯಲಿರುವ ಮಹಿಳಾ ಸಮಾವೇಶದ ಹಿನ್ನೆಲೆಯಲ್ಲಿ ಎಲ್ಲ ಮಹಿಳಾ ಸಂಘಟನೆಗಳು ಒಟ್ಟಾಗಿ ದೇವರಾಜೇಗೌಡ ವಿರುದ್ಧ ಹೋರಾಟ ನಡೆಸಲಿವೆ ಎಂದು ತಿಳಿಸಿದರು. ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ ಯಾವುದೇ ಪೂರ್ವಾಪರ ಮಾಹಿತಿ ಇಲ್ಲದೇ ನನ್ನ ವಿರುದ್ಧ ರಾಜಕೀಯ ದ್ವೇಷದಿಂದ ಆರೋಪ ಮಾಡಲಾಗಿದೆ. ಇಂತಹ ವರ್ತನೆ ಮುಂದುವರಿದರೆ ಜಿಲ್ಲೆಯ ಮಹಿಳೆಯರು ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ದೇವರಾಜೇಗೌಡರ ಹೇಳಿಕೆಗಳು ಮಹಿಳಾ ಸುರಕ್ಷತೆಗೆ ಧಕ್ಕೆಯಾಗಿದ್ದು, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಮುಖ್ಯಮಂತ್ರಿ, ಗೃಹ ಸಚಿವರು, ಉಪ ಮುಖ್ಯಮಂತ್ರಿ, ಪೊಲೀಸ್ ಮಹಾನಿರ್ದೇಶಕರು ಹಾಗೂ ಹಾಸನ ಜಿಲ್ಲಾಡಳಿತ ತಕ್ಷಣ ಕ್ರಮ ವಹಿಸಿ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು. ಜ್ಯೋತಿ, ರತ್ನಮ್ಮ, ಶಶಿಕಲಾ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.