ಹಾಸನ: ಅರಕಲಗೂಡು ತಾಲ್ಲೂಕಿನ ಬನ್ನೂರು ಗ್ರಾಮದ ದೊಡ್ಡಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿದ್ದು, ಮೀನುಗಾರ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ.

ವಡೆನೂರು ಗ್ರಾಮದ ಶಿವಣ್ಣ ಅವರು ₹65 ಸಾವಿರಕ್ಕೆ ಕೆರೆಯನ್ನು ಗುತ್ತಿಗೆ ಪಡೆದು, ಮೀನು ಸಾಕಣೆ ಮಾಡುತ್ತಿದ್ದರು. ಒಂದು ಮರಿಗೆ ₹3ರಂತೆ ಸುಮಾರು ಒಂದು ಲಕ್ಷ ಮೀನಿನ ಮರಿಗಳನ್ನು ಕೆರೆಗೆ ಬಿಟ್ಟಿದ್ದರು.

ಪ್ರಸ್ತುತ ಕೆರೆಯಲ್ಲಿ ತಲಾ ಒಂದು, ಒಂದೂವರೆ ಕೆ.ಜಿ. ತೂಕದ ಸಾವಿರಾರು ಮೀನುಗಳು ಸತ್ತು ತೇಲುತ್ತಿವೆ. ಇನ್ನೂ ಮೀನುಗಳು ಸಾಯುತ್ತಲೇ ಇವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕೆರೆಗೆ ವಿಷ ಬೆರೆಸಿರುವುದು ಅಥವಾ ನೀರಿನ ಮಟ್ಟ ಕಡಿಮೆಯಾಗಿ ಆಮ್ಲಜನಕದ ಕೊರತೆ ಶಂಕೆ ವ್ಯಕ್ತವಾಗಿದೆ.

ಲಕ್ಷಾಂತರ ರೂಪಾಯಿ ನಷ್ಟ ಆಗಿದ್ದು, ಸೂಕ್ತ ಪರಿಹಾರ ನೀಡುವಂತೆ ಶಿವಣ್ಣ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-36-832123591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.