ಹಾಸನ: ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅಬ್ಬೂರು ಮಾಚಗೌಡನಹಳ್ಳಿ (ಎಬಿಎಂ) ಗ್ರಾಮದಲ್ಲಿ ಆಶ್ರಯ ಯೋಜನೆಯಡಿ ಹಂಚಿಕೆಯಾದ ಮನೆಗಳನ್ನು ಕಾನೂನುಬಾಹಿರವಾಗಿ ಧ್ವಂಸ ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಅಲ್ಲಿನ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಎದುರು ಸಂಘಟಿತರಾದ ಗ್ರಾಮಸ್ಥರು ಹಾಗೂ ರೈತ ಮುಖಂಡರು, ಕುರಿ, ಮೇಕೆ, ಹಸುಗಳೊಂದಿಗೆ ಎನ್.ಆರ್. ವೃತ್ತದ ಮೂಲಕ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಧಿಕ್ಕಾರ ಕೂಗಿದರು.

ಈ ವೇಳೆ ಮಾತನಾಡಿದ ರೈತ ಮುಖಂಡ ಬಾಬು, 1991-92ರಲ್ಲಿ ತಹಶೀಲ್ದಾರ್ ಅವರಿಂದ ಆಶ್ರಯ ಯೋಜನೆಯ ಅಡಿಯಲ್ಲಿ ಕಾನೂನುಬದ್ಧವಾಗಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ಹಲವು ವರ್ಷಗಳಿಂದ ವಾಸಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಶಾಸಕರ ಒತ್ತಡದ ಮೇರೆಗೆ ನೋಟಿಸ್ ಅಥವಾ ಕಾನೂನು ಪ್ರಕ್ರಿಯೆ ಪಾಲಿಸದೇ ಮನೆಗಳಿಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಿದರು.

ಕೆಲ ಮನೆಗಳ ಗೋಡೆಗಳನ್ನು ಕೆಡವಲಾಗಿದ್ದು, ಇನ್ನೂ ಕೆಲವು ಮನೆಗಳನ್ನು ತೆರವುಗೊಳಿಸಲು ಪ್ರಯತ್ನ ನಡೆದಿದೆ. ಪ್ರಭಾವಿ ವ್ಯಕ್ತಿಗಳ ಒತ್ತಡದಿಂದ ತಾಲ್ಲೂಕು ಆಡಳಿತವು ಅನಧಿಕೃತ ವ್ಯಕ್ತಿಗಳಿಗೆ ಅವಕಾಶ ನೀಡುತ್ತಿದ್ದಾರೆ ಎಂದು ದೂರಿದರು.

ಹಕ್ಕುಪತ್ರ ಹೊಂದಿರುವ ನಿವಾಸಿಗಳಿಗೆ ತಮ್ಮ ಜಾಗದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ನಿರ್ಬಂಧ ವಿಧಿಸಿರುವುದು ಅಮಾನವೀಯ ಕ್ರಮ. ಈ ಘಟನೆ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದ್ದು, ಬಡ ಕುಟುಂಬಗಳು ಈಗ ಟಾರ್ಪಾಲ್ನಲ್ಲಿ ವಾಸಿಸುವ ಅನಿವಾರ್ಯತೆ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮನೆಗಳ ಹಾನಿಯನ್ನು ತಕ್ಷಣ ನಿಲ್ಲಿಸಲು ಆದೇಶ ನೀಡಬೇಕು. ಈಗಾಗಲೇ ಹಾನಿಗೊಳಿಸಿದ ಮನೆಗಳಿಗೆ ಪರಿಹಾರ ನೀಡಬೇಕು. ತಹಶೀಲ್ದಾರ್ ಕೂಡ ಬೇಜವಾಬ್ದಾರಿ ವರ್ತನೆ ತೋರಿದ್ದು, ಈ ಪ್ರಕರಣದಲ್ಲಿನ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಕ್ಕುಪತ್ರದ ಆಧಾರದಲ್ಲಿ ತಮ್ಮ ವಾಸಸ್ಥಳವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.

ಯಾವುದೇ ಅಭಿವೃದ್ಧಿ ಯೋಜನೆಗಾಗಿ ಜಾಗ ಬೇಕಿದ್ದರೆ ಕಾನೂನುಬದ್ಧ ಪರಿಹಾರ ಹಾಗೂ ಪುನರ್ವಸತಿ ಒದಗಿಸುವಂತೆ ಆಗ್ರಹಿಸಿದ ಅವರು, ಈ ಸಂಬಂಧ ಹಕ್ಕುಪತ್ರ ಪ್ರತಿಗಳು, ಫೋಟೊ ಹಾಗೂ ವೀಡಿಯೊ ಸಾಕ್ಷಿಗಳು ಮತ್ತು ಗುರುತಿನ ದಾಖಲೆಗಳನ್ನು ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಿರುವುದಾಗಿ ತಿಳಿಸಿದರು.

ನಮ್ಮ ಬೇಡಿಕೆ ಈಡೇರದಿದ್ದರೆ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ಹಾಕುವ ಮೂಲಕ ಹಕ್ಕೊತ್ತಾಯ ಮಾಡಲಾಗುವುದು ಎಂದರು.

ಸಾದಿಕ್, ಸಮೀವುಲ್ಲಾ, ಪವಿತ್ರಾ, ಕವಿತಾ, ವಿಠ್ಠಲ, ಆನೆಕೆರೆ ರವಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-36-9855965

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.