ಹಾಸನ: ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಹೋಬಳಿ ವ್ಯಾಪ್ತಿಯ ಅರಸೀಕಟ್ಟೆ ಕಾವಲು ಪ್ರದೇಶದ ಅರಣ್ಯದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಗಿತಕ್ಕೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅರಕಲಗೂಡು ಕಾವಲು ಸಮಿತಿಯ ಅಧ್ಯಕ್ಷ ವಿಜಯಕುಮಾರ್ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೆ ನಂ.116ಕ್ಕೆ ಸೇರಿದ ಈ ಅರಣ್ಯ ಪ್ರದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಗಣಿಗಾರಿಕೆಯಿಂದ ಸುತ್ತಲಿನ ಗ್ರಾಮಗಳ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಆರೋಪಿಸಿದರು.

ಕಲ್ಲುಬಂಡೆ ಸ್ಫೋಟಗಳಿಂದ ಉಂಟಾಗುವ ಭಾರೀ ಶಬ್ದ ಹಾಗೂ ದೂಳಿನ ಪರಿಣಾಮವಾಗಿ ಶಾಲಾ ಕೊಠಡಿಗಳಿಗೆ ಹಾನಿಯಾಗಿ ಮಕ್ಕಳ ವಿದ್ಯಾಭ್ಯಾಸಕ್ಕೂ ಅಡ್ಡಿ ಉಂಟಾಗುತ್ತಿದೆ. ಭಯದಿಂದ ಹಲವು ಮಕ್ಕಳು ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದಾರೆ. ಪರ್ಯಾಯ ವ್ಯವಸ್ಥೆಯಾಗಿ ಗ್ರಾಮದ ದೇವಸ್ಥಾನದಲ್ಲಿ ತರಗತಿಗಳು ನಡೆಯುತ್ತಿವೆ ಎಂದು ಹೇಳಿದರು.

ಗಣಿಗಾರಿಕೆಯಿಂದ ಉಂಟಾಗುತ್ತಿರುವ ದೂಳಿನ ಪರಿಣಾಮವಾಗಿ ಕೃಷಿ ಮಾಡಲು ಆಗುತ್ತಿಲ್ಲ. ಹೊಲಗಳು ಹಾನಿಗೊಳಗಾಗುತ್ತಿದ್ದು, ಬೆಳೆ ಉತ್ಪಾದನೆ ಕುಸಿದಿದೆ. ರೈತರು ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.

ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಸಂಪೂರ್ಣ ಅನಧಿಕೃತವಾಗಿದೆ. ಇದರಿಂದ ಪರಿಸರ ಹಾನಿಯ ಜೊತೆಗೆ ಜನರ ಆರೋಗ್ಯ ಮತ್ತು ಮಕ್ಕಳ ಭವಿಷ್ಯಕ್ಕೂ ದೊಡ್ಡ ಅಪಾಯ ಉಂಟಾಗಿದೆ. ತಕ್ಷಣವೇ ಗಣಿಗಾರಿಕೆಯನ್ನು ನಿಲ್ಲಿಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹಿಸಿ ಎರಡು ದಿನದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುತ್ತಿದ್ದೇವೆ. ಇತ್ತೀಚಿಗೆ ಜಿಲ್ಲಾಧಿಕಾರಿ ಸಹ ಗಣಿಗಾರಿಕೆ ನಡೆಯುತ್ತಿರುವ ಪ್ರದೇಶವನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲಿನ ವಸ್ತು ಸ್ಥಿತಿಯನ್ನು ಪರಾಮರ್ಶೆ ಮಾಡುವ ಮೂಲಕ ಗ್ರಾಮಸ್ಥರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.

ಪ್ರಸನ್ನ, ಯಶವಂತ್, ರವಿ, ದೇವರಾಜು, ರಾಮೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-36-1429881255

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.