ಹಾಸನ: ಕಲಾವಿದರಿಗೆ ವೈದ್ಯಕೀಯ ಬಿಲ್ ಮರು ಪಾವತಿಗೆ ಅನುಕೂಲ ಆಗುವಂತೆ ನಿಗದಿತ ಅನುದಾನ ಕಾಯ್ದಿರಿಸುವಂತೆ ಪ್ರಸ್ತಾವ ಸಲ್ಲಿಸಲು ಹೆಚ್ಚಿಸಲು ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಹಾಸನಾಂಬ ಕಲಾಕ್ಷೇತ್ರದ ನಿರ್ವಹಣಾ ಸಮಿತಿ ಹಾಗೂ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಸಲಹಾ ಸಮಿತಿ ಸದಸ್ಯರ ಸಲಹೆ ಮೇರೆಗೆ ಕಲಾವಿದರಿಗೆ ಆರೋಗ್ಯ ವಿಮೆ ಯೋಜನೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಗುರುತಿನ ಚೀಟಿ ನೀಡಲಾಗಿರುವ 404 ಕಲಾವಿದರ ಒಂದು ಗ್ರೂಪ್ ಮಾಡಿ. ಇದರಿಂದ ಮಾಹಿತಿ ಹಂಚಿಕೊಳ್ಳಲು ನೆರವಾಗುತ್ತದೆ. ಕಲಾವಿದರಿಗೆ ಒಂದು ಕಾರ್ಯಾಗಾರ ಏರ್ಪಡಿಸಿ, ಇಲಾಖೆ ಮೂಲಕ ಇರುವ ಸೌಲಭ್ಯಗಳು, ಸರ್ಕಾರದ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾಸನಾಂಬ ಕಲಾಕ್ಷೇತ್ರದ ಬಾಡಿಗೆ ಮತ್ತು ಅನುಪಯುಕ್ತ ವಸ್ತುಗಳಿಗೆ ದರ ನಿಗದಿಪಡಿಸಿ ಕೊಡಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಹಾಸನಾಂಬ ಕಲಾಕ್ಷೇತ್ರದ ವಿದ್ಯುತ್ ಪರಿವರ್ತಕ ಬದಲಾವಣೆ ಮತ್ತು ಭದ್ರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪರಿಶೀಲಿಸಿ ಸೆಸ್ಕ್ ಅಧಿಕಾರಿಗಳಿಂದ ಪ್ರಮಾಣಪತ್ರ ಪಡೆಯುವಂತೆ ಸೂಚಿಸಿದರು.

ಕಲಾವಿದರ ಸಂಘದ ಅಧ್ಯಕ್ಷ ರವಿ, ಕಲಾವಿದರಾದ ದರ್ಶನ್ ವೆಂಕಟೇಶ್, ರಾಮಣ್ಣ, ಶೇಖರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-36-1544295513

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.