ಹಾಸನ: ಹತ್ತು ವರ್ಷಕ್ಕೊಮ್ಮೆ ನಡೆಯುವ ಐತಿಹಾಸಿಕ ಬೂವನಹಳ್ಳಿ ದೇವಿರಮ್ಮ ಜಾತ್ರೆಯ ಅಂಗವಾಗಿ ಬೂವನಹಳ್ಳಿ, ಸಂಕೇನಹಳ್ಳಿ ಸೇರಿದಂತೆ ಸುತ್ತಲಿನ 12ಕ್ಕೂ ಹೆಚ್ಚು ಗ್ರಾಮಗಳಲ್ಲಿ ಭಾನುವಾರ ಬಾಡೂಟದ ಸಂಭ್ರಮದಿಂದ ನಡೆಯಿತು.

ಜಾತ್ರೆಯ ವಿಶೇಷ ಊಟದ ವ್ಯವಸ್ಥೆಯ ಹಿನ್ನೆಲೆಯಲ್ಲಿ ಗ್ರಾಮಗಳ ಪ್ರತಿ ಮನೆಯಲ್ಲೂ ಕೋಳಿ, ಕುರಿ, ಮೇಕೆ ಸೇರಿದಂತೆ ವಿವಿಧ ಬಗೆಯ ಮಾಂಸದ ಖಾದ್ಯಗಳ ಔತಣ ಏರ್ಪಡಿಸಲಾಗಿತ್ತು. ಬಾಡೂಟದ ಸವಿಯಲು ಅಕ್ಕಪಕ್ಕದ ಊರುಗಳಿಂದ ಸಾವಿರಾರು ಮಂದಿ ಬಂದಿದ್ದರಿಂದ ಗ್ರಾಮಗಳ ರಸ್ತೆಗಳು ಜನರಿಂದ ತುಂಬಿ ತುಳುಕುತ್ತಿದ್ದವು.

ರಾಷ್ಟ್ರೀಯ ಹೆದ್ದಾರಿ 75 ಸೇರಿದಂತೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಹುತೇಕ ರಸ್ತೆಗಳಲ್ಲಿ ಭಾರಿ ಜನದಟ್ಟಣೆ ಉಂಟಾಯಿತು. ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿ ಸಂಚಾರ ದಟ್ಟಣೆ ಉಂಟಾಯಿತು. ಸಂಚಾರ ಸುಗಮಗೊಳಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಮೇ 9 ಮತ್ತು 10ರಂದು ದೇವಿರಮ್ಮ ಜಾತ್ರಾ ಮಹೋತ್ಸವ ನಡೆದಿದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈಗಾಗಲೇ ಜಾತ್ರೆಯನ್ನು ಉದ್ಘಾಟಿಸಿದ್ದಾರೆ. ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಸಹ ಜಾತ್ರೆಗೆ ಚಾಲನೆ ನೀಡಿದ್ದರು.

ಜಾತ್ರೆಯ ಅಂಗವಾಗಿ ಭಾನುವಾರ ಗ್ರಾಮಗಳಲ್ಲಿ ವಿಶೇಷ ಊಟದ ವ್ಯವಸ್ಥೆ ಮಾಡಿದ್ದರಿಂದ ಎಲ್ಲೆಡೆ ಭಕ್ತರ ನೂಕುನುಗ್ಗಲು ಹೆಚ್ಚಾಗಿತ್ತು. ಸಂಬಂಧಿಕರು, ಸ್ನೇಹಿತರ ಮನೆಗಳಿಗೆ ತೆರಳಿ ಬಾಡೂಟ ಸವಿದು ಸಂಭ್ರಮಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-40-1435934053

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.