ಹಾಸನ: ನಗರದ ಪ್ರಬಿ.ಎಂ. ರಸ್ತೆಯ ತಿರುವಿನ ಬಳಿ ಮಂಗಳವಾರ ಬೆಳಗಿನ ಜಾವ ಖಾಸಗಿ ಸ್ಲೀಪರ್ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನವು ಸಂಪೂರ್ಣವಾಗಿ ಬಸ್ಸಿನ ಅಡಿಗೆ ಸಿಲುಕಿಕೊಂಡಿತ್ತು. ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಯುವಕರೂ ಬಸ್ಸಿನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಧಾವಿಸಿದ ಸ್ಥಳೀಯರು, ಬಸ್ಸಿನ ಅಡಿಯಲ್ಲಿ ಸಿಲುಕಿದ್ದ ಯುವಕರನ್ನು ರಕ್ಷಿಸಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರಿಂದಾಗಿ ಬಿ.ಎಂ. ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.