ಹಾಸನ: ಡಿಎ ಪಾವತಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರ ನಗರದಲ್ಲಿ ಬಿಎಸ್ಎನ್ಎಲ್ ನಿವೃತ್ತ ನೌಕರರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ರಾಷ್ಟ್ರವ್ಯಾಪಿ ಹೋರಾಟದ ಭಾಗವಾಗಿ ನಗರದ ಬಿ.ಎಂ. ರಸ್ತೆ ಪಕ್ಕದಲ್ಲಿ ಇರುವ ಬಿಎಸ್ಎನ್ಎಲ್ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ನಿವೃತ್ತ ನೌಕರರು ಭಾಗವಹಿಸಿದ್ದರು. ಬೇಡಿಕೆಗಳ ಫಲಕಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಡಿಎ ಪಾವತಿ ತಡೆ ಹಿಡಿದಿರುವುದರಿಂದ ನಿವೃತ್ತ ನೌಕರರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಪಿಂಚಣಿದಾರರು ಆರ್ಥಿಕವಾಗಿ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ನಿವೃತ್ತ ನೌಕರ ಎಸ್. ನಾಗರಾಜು, ಕೇಂದ್ರ ಸರ್ಕಾರ ಬಜೆಟ್ನಲ್ಲಿ ಹೊಸ ನಿಯಮಗಳನ್ನು ಸೇರಿಸುವ ಮೂಲಕ ಪಿಂಚಣಿ ಪರಿಷ್ಕರಣೆ ಹಾಗೂ ಡಿಎ ನೀಡುವ ಪ್ರಕ್ರಿಯೆಗೆ ಅಡ್ಡಿಯುಂಟು ಮಾಡಿದೆ. ಭವಿಷ್ಯದಲ್ಲಿ ಪೇ ಕಮಿಷನ್ ಅಥವಾ ರಿವಿಷನ್ ನಡೆದರೂ ಪಿಂಚಣಿಯನ್ನು ಪರಿಷ್ಕರಿಸುವುದಿಲ್ಲ ಹಾಗೂ ಡಿಎ ನೀಡುವುದಿಲ್ಲ ಎಂಬ ಅನಿಶ್ಚಿತತೆ ಉಂಟಾಗಿದೆ ಎಂದರು.

ಜನವರಿ 2026ರಿಂದ ನೀಡಬೇಕಾಗಿದ್ದ ಡಿಎ ಪಾವತಿ ತಡೆಹಿಡಿದಿರುವುದು ಖಂಡನೀಯ. ‘ಅಫಂಡಬಿಲಿಟಿ’ ಎಂಬ ಷರತ್ತು ವಿಧಿಸುವ ಮೂಲಕ ಸರ್ಕಾರ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಬೆಲೆ ಏರಿಕೆಯ ನಡುವೆಯೇ ಡಿಎ ತಡೆ ಹಿಡಿದಿರುವುದು ಪಿಂಚಣಿದಾರರ ಬದುಕಿಗೆ ಹೆಚ್ಚುವರಿ ಹೊರೆ ತಂದಿದೆ. ಬಾಕಿ ಇರುವ ಡಿಎ ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಪಿಂಚಣಿ ಸಂಬಂಧಿತ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಸ್ಪಂದಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಭಟನಕಾರರು ಎಚ್ಚರಿಸಿದರು. ಏಪ್ರಿಲ್ 30 ಹಾಗೂ ಮೇ 1ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ರಾಜು, ಶಿವಣ್ಣ, ಸಂಪತ್ ಕುಮಾರ್, ಕಾಂತರಾಜು, ಅಯ್ಯಂಗಾರ್, ದೇವರಾಜು, ನಾಗರಾಜ್, ರಾಮಚಂದ್ರ, ನಿರ್ವಾಣೆಗೌಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-36-1814782871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.