ಹಾಸನ: ತಡೆಹಿಡಿದಿರುವ ತುಟ್ಟಿಭತ್ಯೆ ಬಿಡುಗಡೆ ಹಾಗೂ ಪಿಂಚಣಿ ಪರಿಷ್ಕರಣೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬಿಎಸ್ಎನ್ಎಲ್–ಡಿಒಟಿ ನಿವೃತ್ತ ನೌಕರರ ಸಂಘಟನೆಗಳ ಒಕ್ಕೂಟದ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು.

ರಾಷ್ಟ್ರವ್ಯಾಪಿ ಪ್ರತಿಭಟನೆಯ ಭಾಗವಾಗಿ ನಗರದ ಬಿ.ಎಂ. ರಸ್ತೆಯಲ್ಲಿರುವ ಬಿಎಸ್ಎನ್ಎಲ್ ಕಚೇರಿ ಆವರಣದ ಮುಂದೆ ನೂರಕ್ಕೂ ಅಧಿಕ ನಿವೃತ್ತ ನೌಕರರು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಿವೃತ್ತ ನೌಕರ ಸಂಪತ್ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ಬಜೆಟ್ನಲ್ಲಿ ಹೊಸ ನಿಯಮ ಸೇರಿಸಿ ಪಿಂಚಣಿ ಪರಿಷ್ಕರಣೆ ಹಾಗೂ ತುಟ್ಟಿಭತ್ಯೆ ನೀಡುವ ಪ್ರಕ್ರಿಯೆಗೆ ಅಡ್ಡಿ ಉಂಟು ಮಾಡಿದೆ. ಭವಿಷ್ಯದಲ್ಲಿ ಯಾವುದೇ ವೇತನ ಆಯೋಗ ಅಥವಾ ಪರಿಷ್ಕರಣೆ ನಡೆದರೂ ಅದರಂತೆ ಪಿಂಚಣಿ ಪರಿಷ್ಕರಿಸುವುದಿಲ್ಲ, ಡಿಎ ನೀಡುವುದಿಲ್ಲ ಎಂಬ ಅಸ್ಪಷ್ಟತೆ ಸೃಷ್ಟಿಸಲಾಗಿದೆ ಎಂದು ದೂರಿದರು.

ಜನವರಿಯಿಂದ ನೀಡಬೇಕಿದ್ದ ಡಿಎ ಪಾವತಿಯನ್ನು ‘ಅಫಂಡಬಿಲಿಟಿ’ ಎಂಬ ಶರತ್ತು ವಿಧಿಸಿ ಸರ್ಕಾರ ತಡೆಹಿಡಿದಿದೆ. ಇದು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವ ತಂತ್ರ. ದಿನದಿಂದ ದಿನಕ್ಕೆ ಬೆಲೆ ಏರಿಕೆಯಿಂದ ಸಾಮಾನ್ಯ ಜೀವನವೇ ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಡಿಎ ತಡೆಹಿಡಿದಿರುವುದು ನಿವೃತ್ತರ ಬದುಕಿಗೆ ಮತ್ತಷ್ಟು ಹೊರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ನಿರ್ಲಕ್ಷ್ಯ ಧೋರಣೆಯಿಂದ ಪಿಂಚಣಿದಾರರು ಆರ್ಥಿಕವಾಗಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಡಿಎ ತಡೆಹಿಡಿದಿರುವುದು ನಮ್ಮ ಜೀವನವನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.

ಸರ್ಕಾರ ತಕ್ಷಣ ಬಾಕಿ ಇರುವ ಡಿಎ ಬಿಡುಗಡೆ ಮಾಡಬೇಕು. ಪಿಂಚಣಿ ಸಂಬಂಧಿತ ಎಲ್ಲ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು. ಎಲ್ಲ ಪಿಂಚಣಿ ಸಂಘಟನೆಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಹೋರಾಟ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಕಾರರು ಬೇಡಿಕೆಗಳ ಫಲಕಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ಹೊರಹಾಕಿದರು. ನಿವೃತ್ತ ನೌಕರರಾದ ಶಿವಣ್ಣ, ಕಾಂತರಾಜು, ರಾಜು, ಫೈರೋಜ್, ಸಿದ್ದೇಗೌಡ, ದೇವರಾಜು, ನಾಗರಾಜ್, ರಾಮಚಂದ್ರ, ನಿರ್ವಹಣೆಗೌಡ ಸೇರಿದಂತೆ ನೂರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-36-1226140353

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.