ಹಾಸನ: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಚನ್ನರಾಯಪಟ್ಟಣ ತಾಲ್ಲೂಕು ಕೇಂದ್ರದಲ್ಲಿ ಸುಮಾರು ₹1 ಕೋಟಿ ವೆಚ್ಚದಲ್ಲಿ ನೂತನ ಕಾಂಗ್ರೆಸ್ ಭವನ ನಿರ್ಮಾಣಗೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ದಶಕಗಳ ಕನಸು, ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಗದರ್ಶನ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಾಯಕತ್ವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ನಾಯಕತ್ವದಲ್ಲಿ ನನಸಾಗುತ್ತಿದೆ. ನೂತನ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಮೇ 16ರಂದು ಬೆಳಿಗ್ಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ’ ಎಂದರು.

‘60x40 ನಿವೇಶನದಲ್ಲಿ ಸುಮಾರು ₹1 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾಗಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲಾಗಿದೆ. ನೂತನ ಭವನದಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲವಾಗಲೆಂದು ಕೋಚಿಂಗ್ ತರಗತಿ, ಮಹಿಳೆಯರಿಗೆ ಹೆಚ್ಚಿನ ನೆರವು ಕಲ್ಪಿಸುವ ನಿಟ್ಟಿನಲ್ಲಿ ಸ್ತ್ರೀಶಕ್ತಿಯ ಹಾಗೂ ಸ್ವ ಸಹಾಯ ಸಂಘಗಳ ಸದಸ್ಯೆಯರಿಗೆ ತರಬೇತಿ ಸೇರಿದಂತೆ ಮಹಿಳಾ ಸಬಲೀಕರಣಕ್ಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಭವನ ಕೇವಲ ರಾಜಕೀಯ ಚಟುವಟಿಕೆಗಳಿಗೆ ಸೀಮಿತ ಆಗಬಾರದೆಂಬ ದೃಷ್ಟಿಯಿಂದ ಈ ಪರಿಕಲ್ಪನೆ ಮಾಡಲಾಗಿದೆ’ ಎಂದರು.

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ಸಿಗುತ್ತಿರುವ ಸೌಲಭ್ಯಗಳ ಕುರಿತು ಮತದಾರರಿಗೆ ಮನವರಿಕೆ ಮಾಡಿಕೊಡುವ ಮೂಲಕ ಪಕ್ಷ ಸಂಘಟನೆಗೆ ಮುಂದಾಗುವಂತೆ ಸಲಹೆ ನೀಡಿದರು. ಜಿಲ್ಲೆ ಹಾಗೂ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಸಂಸದ ಶ್ರೇಯಸ್ ಪಟೇಲ್ ನೇತೃತ್ವದಲ್ಲಿ ನೀರಾವರಿ ಯೋಜನೆ, ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳ ಶ್ರೀರಕ್ಷೆ 2028ನೇ ವಿಧಾನಸಭಾ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಈ.ಎಚ್ ಲಕ್ಷ್ಮಣ್, ಕೆಪಿಸಿಸಿ ಸದಸ್ಯೆ ರಾಜೇಶ್ವರಿ ವಿಜಯ್ ಕುಮಾರ್, ಕರ್ನಾಟಕ ವಿದ್ಯುತ್ ಮಂಡಳಿ ಅಧ್ಯಕ್ಷ ಲಲಿತ್ ರಾಘವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಎಂ. ರಾಮಚಂದ್ರ, ಎಂ.ಕೆ. ಮಂಜೇಗೌಡ, ಕೆಎಸ್ಐಸಿ ನಿಗಮದ ಮಾಜಿ ಅಧ್ಯಕ್ಷ ಸಿ.ವಿ. ರಾಜಪ್ಪ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಎಂ. ಶಂಕರ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-36-2114043101

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.