ಹಾಸನ: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೊ ಪ್ರಕರಣಗಳ ತಡೆ ಮತ್ತು ಬಾಲ ಕಾರ್ಮಿಕರ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಹೇಮಾವತಿ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ಇಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಾಲ್ಯ ವಿವಾಹ ತಡೆಗೆ ಇರುವ ಸಹಾಯವಾಣಿ ಸಂಖ್ಯೆ ಕುರಿತು ವ್ಯಾಪಕ ಪ್ರಚಾರ ಆಗಬೇಕು. ಬಾಲ್ಯ ವಿವಾಹ ತಡೆದ ನಂತರ ಮುಂದೆ ಅದನ್ನು ಫಾಲೋ ಅಪ್ ಮಾಡುವಂತೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಯಾವುದೇ ಮಗುವು ಶಿಕ್ಷಣದಿಂದ ವಂಚಿತರಾಗದಂತೆ, ಶಾಲೆಯಿಂದ ಹೊರಗುಳಿದ ಮಕ್ಕಳ ಮರು ಸೇರ್ಪಡೆಗೆ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಶಾಲೆಗಳಲ್ಲಿ ಪೋಷಕರ ಸಭೆ ನಡೆಸುವ ಸಂದರ್ಭದಲ್ಲಿ ಪೋಕ್ಸೊ, ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ದತಿ ಕುರಿತು ತಿಳಿವಳಿಕೆ ಮೂಡಿಸಲು ಕ್ರಮಕೈಗೊಳ್ಳಿ, ಶಿಕ್ಷಕರಿಗೆ ತರಬೇತಿ ಆಯೋಜಿಸಿದ ಸಂದರ್ಭದಲ್ಲಿ ನ್ಯಾಯಾಧೀಶರು, ಪೊಲೀಸ್ ಅಧಿಕಾರಿಗಳಿಂದ ಕಾಯ್ದೆ ಕುರಿತು ಉಪನ್ಯಾಸ ನೀಡಲು ಆಹ್ವಾನಿಸುವಂತೆ ಸೂಚಿಸಿದರು. ಪೋಕ್ಸೊ ಪ್ರಕರಣದಲ್ಲಿ ಸಾಕ್ಷಿ ಹಾಳಾಗದಂತೆ ವಿಳಂಬ ಮಾಡದೇ ಘಟನೆಯಾದ ತಕ್ಷಣ ತಪಾಸಣೆ ನಡೆಸಿ ವೈದ್ಯಕೀಯ ವರದಿ ಪಡೆದುಕೊಳ್ಳಲು ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

ಬಸ್ ನಿಲ್ದಾಣ, ರಸ್ತೆ ಪಕ್ಕದಲ್ಲಿ, ಅಂಗಡಿಗಳ ಮುಂದೆ ನಿರಾಶ್ರಿತರು ರಾತ್ರಿ ವೇಳೆಯಲ್ಲಿ ಮಲಗುತ್ತಾರೆ. ಅವರಿಗೆ ತಂಗಲು ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸ್ಪಂದಿಸಿ. ಕೆರೆಗಳ ಒತ್ತುವರಿ ತೆರವು, ಹೂಳು ತೆಗೆಸಿ ಮಳೆಗಾಲದಲ್ಲಿ ನೀರು ಶೇಖರಣೆಗೆ ಕ್ರಮ ಜರುಗಿಸಿ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ದಾಕ್ಷಾಯಿಣಿ ಜಿ.ಕೆ., ಹಿರಿಯ ಸಿವಿಲ್ ನ್ಯಾಯಾಧೀಶ ಪುಟ್ಟ ಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ತಮ್ಮಯ್ಯ, ಶ್ರೀನಿಧಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-36-591258461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.