ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ ನಗರಕ್ಕೆ ನೀರಿನ ಸಮಸ್ಯೆ ಇಲ್ಲ: ಶಾಸಕ ಶಾಸಕ ಸ್ವರೂಪ್

ಗೊರೂರು ಜಲಾಶಯಕ್ಕೆ ಶಾಸಕ ಸ್ವರೂಪ್‌ ಪ್ರಕಾಶ್‌ ಭೇಟಿ
Published 9 ಫೆಬ್ರುವರಿ 2024, 12:52 IST
Last Updated 9 ಫೆಬ್ರುವರಿ 2024, 12:52 IST
ಅಕ್ಷರ ಗಾತ್ರ

ಹಾಸನ: ನಗರಸಭೆ ನಗರ ಪಾಲಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಅಭಾವ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಗೊರೂರಿನ ಜಲ ಶುದ್ಧೀಕರಣ ಘಟಕಕ್ಕೆ ಶಾಸಕ ಶಾಸಕ ಸ್ವರೂಪ್ ಪ್ರಕಾಶ್‌ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಘಟಕದಲ್ಲಿ ಪರಿಶೀಲನೆ ನಡೆಸಿದ ಅವರು, ನೀರಿನ ಲಭ್ಯತೆ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸ್ವರೂಪ್‌, ‘ಪ್ರಸ್ತುತ ಹಾಸನ ನಗರಕ್ಕೆ ಪ್ರತಿ ದಿನ 30 ಎಂಎಲ್‌ಡಿ ನೀರಿನ ಅಗತ್ಯ ಇದೆ. ನಗರಸಭೆ ನಗರ ಪಾಲಿಕೆ ಅದಾಗ 38 ಎಂಎಲ್‌ಡಿ ನೀರಿನ ಅಗತ್ಯ ಬರಬಹುದು. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರಿನ ಸಂಗ್ರಹ ಹಾಗೂ ಲಭ್ಯತೆ ಬಗ್ಗೆ ಮಾಹಿತಿ ಪಡೆದಿದ್ದೇನೆ’ ಎಂದರು.

‘ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಬರಗಾಲದಲ್ಲಿ ಕೂಡ ಹಾಸನ ನಗರಕ್ಕೆ ಸಮರ್ಪಕವಾಗಿ ಒದಗಿಸಲು ನೀರು ಲಭ್ಯವಿದೆ. ಪ್ರಮುಖವಾಗಿ ನಗರಸಭೆಗೆ ಒಳಪಟ್ಟ 25 ಹಳ್ಳಿಗಳಿಗೆ ನೀರಿನ ಸಮಸ್ಯೆ ಎದುರಾಗಲಿದ್ದು, ಅಂತಹ ಗ್ರಾಮಗಳಿಗೆ ಕೊಳವೆಬಾವಿ ಅಥವಾ ಟ್ಯಾಂಕರ್ ಮೂಲಕ ನೀರು ಒದಗಿಸಲು ಯೋಜಿಸಲಾಗಿದೆ’ ಎಂದರು.

‘ಕುಡಿಯುವ ನೀರಿನ ಅಭಾವ ತಪ್ಪಿಸಲು ಈಗಾಗಲೇ ರಾಜ್ಯ ಸರ್ಕಾರ ಜಿಲ್ಲಾಧಿಕಾರಿ ಮೂಲಕ ಪ್ರತಿ ಶಾಸಕರಿಗೆ ₹ 60 ಲಕ್ಷ ಅನುದಾನ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಜೊತೆ ಶೀಘ್ರವಾಗಿ ಸಭೆ ನಡೆಸಿ, ಬರ ನಿರ್ವಹಣೆ ಹಾಗೂ ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ನಗರಸಭೆ ಆಯುಕ್ತ ಯೋಗಾನಂದ ಮಾತನಾಡಿ, ‘ಹಾಸನ ನಗರಕ್ಕೆ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ. ಬೇಸಿಗೆ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯ ಆದಾಗ ಮಾತ್ರ ನೀರಿನ ಸಮಸ್ಯೆ ಎದುರಾಗಿದೆ. ಆದರೆ ನೀರಿನ ಲಭ್ಯತೆಯನ್ನು ನೋಡಿದರೆ, ಯಾವುದೇ ಕೊರತೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಂಜುನಾಥ್, ಸಹಾಯಕ ಎಂಜಿನಿಯರ್ ಆನಂದ್, ಎಲೆಕ್ಟ್ರಿಕಲ್ ಎಂಜಿನಿಯರ್ ಕವಿತಾ ಇದ್ದರು.

ನಗರಸಭೆಗೆ ಸೇರಿದ ಕೆಲ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬೇಸಿಗೆಯಲ್ಲಿ ವಿದ್ಯುತ್‌ ಕೈಕೊಟ್ಟರೆ ನೀರು ಪೂರೈಕೆಗೆ ತೊಂದರೆ ₹60 ಲಕ್ಷ ಅನುದಾನ ಬಳಕೆ ಕುರಿತು ಶೀಘ್ರ ಸಭೆ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT