ಹಾಸನ: ಸ್ವಚ್ಛತೆ ಎಂಬುದು ಕೇವಲ ಒಂದು ದಿನಕ್ಕೆ ಸೀಮಿತವಾದ ಕಾರ್ಯಕ್ರಮವಲ್ಲ. ಅದು ನಮ್ಮ ಪ್ರತಿದಿನದ ಬದುಕಿನ ಭಾಗ ಹಾಗೂ ಜೀವನದ ಶೈಲಿ ಆಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶುಭಂ ಶುಕ್ಲಾ ತಿಳಿಸಿದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಮಹಾನಗರ ಪಾಲಿಕೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಸಂಘ-ಸಂಸ್ಥೆಗಳು ಮತ್ತು ಕೈಗಾರಿಕೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾ ಗಿದ್ದ ಸ್ವಚ್ಛತಾ ಜಾಗೃತಿ ಮತ್ತು ಪರಿಸರ ಸಂರಕ್ಷಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ, ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸ್ವಚ್ಛತೆಯನ್ನು ಮೊದಲು ಮನೆಯಿಂದ ಪ್ರಾರಂಭಿಸಿ. ಸಮಾಜದ ಎಲ್ಲೆಡೆ ಸ್ವಚ್ಛತೆ ಕಾಪಾಡಲು ನಿಗಾವಹಿಸಿ. ಪ್ರತಿದಿನ ಸ್ವಚ್ಛತೆಗೆ ಗಮನಹರಿಸಬೇಕು. ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.

ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಪರಿಸರ ಪ್ರೇಮಿಗಳು ಭಾಗವಹಿಸಿ ರೈಲ್ವೆ ನಿಲ್ದಾಣದ ಆವರಣವನ್ನು ಸ್ವಚ್ಛಗೊಳಿಸಿದರು. ಕೈಯಲ್ಲಿ ಫಲಕಗಳನ್ನು ಹಿಡಿದು ಸ್ವಚ್ಛತೆ ಮತ್ತು ಪರಿಸರ ರಕ್ಷಣೆಯ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು. ಪರಿಸರ ಅಧಿಕಾರಿ ಭಾಸ್ಕರ್, ಕಲಾವಿದ ಬಿ.ಟಿ ಮಾನವ, ಎಚ್.ಪಿ.ಸಿ.ಎಲ್. ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-36-82300281

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.