ಹಾಸನ: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ನಗರದ ಹೇಮಾವತಿ ಪ್ರತಿಮೆ ಎದುರು ಎಲ್ಇಡಿ ಪರದೆ ಅಳವಡಿಸಿ ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಪ್ರಮಾಣವಚನ ಸಮಾರಂಭವನ್ನು ವೀಕ್ಷಿಸಿದರು.

ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ಹಾಗೂ ಇತರ ಪದಾಧಿಕಾರಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪಕ್ಷದ ವಿವಿಧ ಘಟಕಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

ಇದಕ್ಕೂ ಮೊದಲು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬನವಾಸೆ ರಂಗಸ್ವಾಮಿ, ರಾಜ್ಯ ಕಂಡ ಅಪ್ರತಿಮ ಹೋರಾಟಗಾರ ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಶಿವಕುಮಾರ್ ಅವರ ಸತತ ಶ್ರಮ, ಶ್ರದ್ಧೆ, ಪಕ್ಷಕ್ಕೆ ಸಲ್ಲಿಸಿದ ಅನನ್ಯ ಸೇವೆಯೇ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ತಂದು ಕೂರಿಸಿದೆ. ಅವರಿಗೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಸಿದ್ದರಾಮಯ್ಯ ಅವರ ಅಚಲ ನಿರ್ಧಾರ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಕೂರಿಸಿದೆ. ಅವರ ನಿರ್ಧಾರ ರಾಜ್ಯಕ್ಕೆ, ದೇಶಕ್ಕೆ ಮಾದರಿಯಾಗಿದ್ದು, ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನೀಡಿದ ಕೊಡುಗೆ, ಆಡಳಿತ ಶ್ಲಾಘನೀಯ ಎಂದರು. ಇಂದಿನಿಂದ ಹಾಸನದಲ್ಲಿ ಕಾಂಗ್ರೆಸ್ನ ಹೊಸ ಪರ್ವ ಆರಂಭವಾಗಲಿದೆ. 2028ರ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ 7ಕ್ಕೆ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ಶಿವಕುಮಾರ್ ಅವರು ಎಲ್ಲರನ್ನೂ ಒಗ್ಗೂಡಿಸಿ ಜಯದತ್ತ ಮುನ್ನಡೆಸಲಿದ್ದಾರೆ. ಹಲವು ವರ್ಷಗಳಿಂದ ದುಡಿದ ಕಾರ್ಯಕರ್ತರಿಗೆ ಬದುಕು ಕಟ್ಟಿಕೊಡುವ ಸಮಯ ಬಂದಿದೆ ಎಂದರು.

ಜಿಲ್ಲೆಗೆ ಉತ್ತಮ ಉಸ್ತುವಾರಿ ಸಚಿವರು ಬರಬೇಕು. ಕೇವಲ ಅಧಿಕಾರಿಗಳು, ಆಯ್ದ ಮುಖಂಡರನ್ನು ಭೇಟಿಯಾದರೆ ಸಾಲದು. ಕಾರ್ಯಕರ್ತರು, ಜಿಲ್ಲಾ ಮಟ್ಟದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಇದು ಮುಂದಿನ ಚುನಾವಣೆಗೆ ನೆರವಾಗಲಿದೆ. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ದೊರೆಯುವ ವಿಶ್ವಾಸವಿದೆ ಎಂದು ಹೇಳಿದರು.

ಬೋದೆಶ್, ಆರಿಫ್, ವೆಂಕಟೇಗೌಡ, ರಘು ದಾಸರಕೊಪ್ಪಲು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-36-1773016343

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.