ಗುರುವಾರ , ಆಗಸ್ಟ್ 18, 2022
25 °C

ಹಾಸನದಲ್ಲಿ 5 ಮಂದಿಗೆ ಕೋವಿಡ್ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಕೆಲ ತಿಂಗಳಿಂದ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಶೂನ್ಯ ದಾಖಲೆ ಮಾಡಿದ್ದ ಜಿಲ್ಲೆಯಲ್ಲಿ, ಬುಧವಾರ ಐದು ಜನರಿಗೆ ಕೋವಿಡ್ ದೃಢಪಟ್ಟಿದೆ.

ಕೆಲ ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರತಿ ಜಿಲ್ಲೆಯಲ್ಲೂ ಪ್ರಕರಣ ಹೆಚ್ಚುತ್ತಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.

ಜಿಲ್ಲೆ ಹಾಗೂ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿತ್ಯ 400 ರಿಂದ 500 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗುತ್ತಿದ್ದು, ಬುಧವಾರದ ವರದಿಯಲ್ಲಿ ಐವರಿಗೆ ಕೋವಿಡ್–19 ದೃಢಪಟ್ಟಿದೆ. ಇವರಲ್ಲಿ ನಾಲ್ವರು ಪುರುಷರು ಹಾಗೂ ಒಬ್ಬ ಮಹಿಳೆ ಸೇರಿದ್ದಾರೆ.

ಹಾಸನ ನಗರದ ಇಬ್ಬರು, ಅರಸೀಕೆರೆಯ ಇಬ್ಬರೂ ಹಾಗೂ ಚನ್ನರಾಯಪಟ್ಟಣದ ಒಬ್ಬರಿಗೆ ಸೋಂಕು ತಗುಲಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು