ಹಾಸನ: ನಗರದಲ್ಲಿ ಮಂಗಳವಾರದ ಸಂತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 19ಕ್ಕೂ ಹೆಚ್ಚು ಗೋವುಗಳನ್ನು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಣೆ ನಿರಂತರವಾಗಿ ನಡೆಯುತ್ತಿದೆ ಎಂದು ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಅಕ್ರಮ ಗೋ ಸಾಗಣೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುಂಚಿತವಾಗಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರೂ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ರಕ್ಷಿಸಲಾದ ಗೋವುಗಳನ್ನು ಹಾಸನದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಿಸುತ್ತಿದ್ದಾಗ ಕಾರ್ಯಕರ್ತರು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಗೋವುಗಳನ್ನು ವಶಕ್ಕೆ ಪಡೆದು ಗೋಶಾಲೆಗೆ ರವಾನಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ವಿಹಿಂಪ ಹಾಗೂ ಬಜರಂಗದಳದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಾಹನ ಚಾಲಕ ಹಾಗೂ ಗೋವುಗಳನ್ನು ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖರಾದ ವಿಕ್ಕಿ, ಶಶಿ, ಚೇತನ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-36-227914874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.