ಹಳೇಬೀಡು: ರಾಜನಶಿರಿಯೂರು ಗ್ರಾಮದಲ್ಲಿ ಗಾಳಿ, ಮಳೆಯಿಂದ ರೈತರಿಗೆ ಆಗಿರುವ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಎಐಸಿಸಿ ಸದಸ್ಯ ಬಿ.ಶಿವರಾಂ ತಿಳಿಸಿದರು.

ಗ್ರಾಮದಲ್ಲಿ ಈಚೆಗೆ ಬಿದ್ದ ಮಳೆ, ಗಾಳಿಯಿಂದ ತೋಟಗಾರಿಕಾ ಬೆಳೆಗಳಿಗೆ ಆಗಿರುವ ಹಾನಿಯನ್ನು ಶನಿವಾರ ವಿಕ್ಷಿಸಿದ ನಂತರ ಅವರು ಮಾತನಾಡಿದರು.

‘ಟ್ರಾನ್ಸ್ಫಾರ್ಮರ್ ಹಾಗೂ 30 ವಿದ್ಯುತ್ ಕಂಬಗಳು ಬಿದ್ದು ಹೋಗಿರುವುದರಿಂದ ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಂತಾಗಿದೆ. ತೆಂಗು, ಮಾವು, ಹುಣಸೆ ಹಾಗೂ ಟೊಮೆಟೊ ಬೆಳೆಗೆ ಹಾನಿ ಆಗಿರುವುದರಿಂದ ರೈತರು ನಷ್ಟ ಅನುಭವಿಸುವಂತಾಗಿದೆ. ಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು’ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಚ್.ಬಿ.ಚಂದ್ರಶೇಖರ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಶರತ್.ಎಚ್.ಎನ್, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಬಂಡಿಲಕ್ಕನಕೊಪ್ಪಲು ಸುರೇಶ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-36-1280385452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.