ಹಾಸನ: ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಎಚ್ಡಿಸಿಸಿ ಬ್ಯಾಂಕ್) ಯಾವುದೇ ಹೊಸ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿಲ್ಲ. ಕೆಲ ಕಿಡಿಗೇಡಿಗಳು ಉದ್ಯೋಗದ ಆಮಿಷವೊಡ್ಡಿ ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದು, ಉದ್ಯೋಗಾಕಾಂಕ್ಷಿಗಳು ಮೋಸ ಹೋಗಬಾರದು ಎಂದು ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ವಿವಿಧ 83 ಹುದ್ದೆಗಳ ನೇಮಕಾತಿಗೆ 2018ರಲ್ಲಿ ಮಾತ್ರ ಅಧಿಸೂಚನೆ ಹೊರಡಿಸಲಾಗಿತ್ತು. ಕಿರಿಯ ಸಹಾಯಕ 54, ಐಟಿ ಸೂಪರ್ವೈಸರ್ 7 ಹಾಗೂ ಅಟೆಂಡರ್ 22 ಹುದ್ದೆಗಳಿಗೆ ಸಹಕಾರ ಇಲಾಖೆ ಅನುಮತಿ ಪಡೆದು 2018ರ ನ.5ರಂದು ಪ್ರಕ್ರಿಯೆ ಆರಂಭಿಸಲಾಗಿತ್ತು ಎಂದು ವಿವರಿಸಿದರು.

ಅಧಿಸೂಚನೆ ಅನ್ವಯ ಐಟಿ ಸೂಪರ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ 516 ಅಭ್ಯರ್ಥಿಗಳಿಗೆ 2019ರ ಫೆ.10ರಂದು, ಅಟೆಂಡರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ 2,651 ಅಭ್ಯರ್ಥಿಗಳಿಗೆ ಜೂ.16ರಂದು ಹಾಗೂ ಕಿರಿಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದ 3,541 ಅಭ್ಯರ್ಥಿಗಳಿಗೆ ಜೂ.30ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಆದರೆ 2019ರ ಅ.25ರಂದು ಸಹಕಾರ ಇಲಾಖೆ ನಿಬಂಧಕರು ಸರ್ಕಾರದ ನಿರ್ದೇಶನದಂತೆ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶ ನೀಡಿದ್ದರು. ಈ ಆದೇಶ ಪ್ರಶ್ನಿಸಿ ಬ್ಯಾಂಕಿನ ಆಡಳಿತ ಮಂಡಳಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಬಳಿಕ 2018ರ ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಮುಂದಿನ ಕ್ರಮ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೀಗ ಕೆಲ ಸಮಾಜಘಾತುಕ ವ್ಯಕ್ತಿಗಳು ಬ್ಯಾಂಕಿನ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಡುವುದಾಗಿ ಹೇಳಿ ಅಭ್ಯರ್ಥಿಗಳು ಹಾಗೂ ಅವರ ಕುಟುಂಬದವರನ್ನು ವಂಚಿಸುತ್ತಿದ್ದಾರೆ. ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯ ಸಹಿಯನ್ನು ನಕಲಿ ಸ್ಕ್ಯಾನ್ ಮಾಡಿ, ಬ್ಯಾಂಕಿನ ಲೆಟರ್ಹೆಡ್ ದುರುಪಯೋಗಪಡಿಸಿಕೊಂಡು 2024ರ ದಿನಾಂಕ ನಮೂದಿಸಿದ ನಕಲಿ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳಿಗೆ ಕಳುಹಿಸಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದರು.

2018ರ ಅಧಿಸೂಚನೆಯನ್ನು ಹೊರತುಪಡಿಸಿ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಹೊಸ ಅಧಿಸೂಚನೆ ಹೊರಡಿಸಿಲ್ಲ. ಯಾವುದೇ ಲಿಖಿತ ಪರೀಕ್ಷೆ ನಡೆಸಿಲ್ಲ. ಸಾರ್ವಜನಿಕರು ಮತ್ತು ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಒಳಗಾಗದೇ ನೇರವಾಗಿ ಬ್ಯಾಂಕಿನ ಪ್ರಧಾನ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ನೇಮಕಾತಿ ಪ್ರಕ್ರಿಯೆ ಪುನರಾರಂಭವಾದಲ್ಲಿ ಸರ್ಕಾರದ ನಿಯಮಾವಳಿಗಳ ಅನುಸಾರ ಪಾರದರ್ಶಕವಾಗಿ ನಡೆಸಲಾಗುವುದು. ಬ್ಯಾಂಕಿನ ವೆಬ್ಸೈಟ್ ಹಾಗೂ ದಿನಪತ್ರಿಕೆಗಳ ಮೂಲಕ ಅಧಿಕೃತ ಮಾಹಿತಿ ಪ್ರಕಟಿಸಲಾಗುವುದು ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಹೊನವಳ್ಳಿ ಸತೀಶ್, ಗಿರೀಶ್ ಚನ್ನವೀರಪ್ಪ, ಕಣದಳ್ಳಿ ಮಂಜೇಗೌಡ, ಜಯರಾಂ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-36-1464796061

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.