ಹಾಸನ: ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ತಿಮ್ಮಯ್ಯ (52) ಅವರು ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್ನಲ್ಲಿ ಶನಿವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಅವರು ನಗರದ ಚನ್ನಪಟ್ಟಣ ಬಡಾವಣೆಯ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ಪ್ರಸ್ತುತ ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು.

ಪೊಲೀಸರ ಮಾಹಿತಿ ಪ್ರಕಾರ, ತಿಮ್ಮಯ್ಯ ಅವರು ಶನಿವಾರ ಬೆಳಿಗ್ಗೆ 11.30ರ ಸುಮಾರಿಗೆ ಲಾಡ್ಜ್ನಲ್ಲಿ ಕೊಠಡಿ ಬಾಡಿಗೆಗೆ ಪಡೆದಿದ್ದರು. ಸಂಜೆಯಾದರೂ ಕೊಠಡಿ ಬಾಗಿಲು ತೆರೆಯದ ಕಾರಣದಿಂದ ಅನುಮಾನ ಗೊಂಡ ಲಾಡ್ಜ್ ಸಿಬ್ಬಂದಿ ರಾತ್ರಿ 8.30ರ ವೇಳೆಗೆ ಬೀಗ ಒಡೆದು ಒಳಗೆ ಪ್ರವೇಶಿಸಿದಾಗ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಗೊತ್ತಾಗಿದೆ.

ಆತ್ಮಹತ್ಯೆಗೂ ಮುನ್ನ ತಿಮ್ಮಯ್ಯ ಅವರು ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟಿದ್ದಾರೆ. ಡೆತ್ ನೋಟ್ನಲ್ಲಿರುವ ಮಾಹಿತಿಯ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-4-1591496325

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.