ಹಾಸನ: ಜಿಲ್ಲಾ ದೇವಾಂಗ ಸಂಘದ ವತಿಯಿಂದ ನೂತನ ಸಭಾಂಗಣ ಉದ್ಘಾಟನೆ ಹಾಗೂ ಆದ್ಯ ವಚನಕಾರ ದೇವರ ದಾಸಿಮಯ್ಯ ಅವರ ಜಯಂತಿ ಅಂಗವಾಗಿ ಏಪ್ರಿಲ್ 26ರಂದು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ವಿ.ಎ. ನಂಜುಂಡಸ್ವಾಮಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8.30ಕ್ಕೆ ನೂತನ ಸಭಾಂಗಣ ಉದ್ಘಾಟನೆ ನಡೆಯಲಿದ್ದು, 9.30ಕ್ಕೆ ದೇವಾಂಗ ಸಂಘದ ಮೆರವಣಿಗೆ ನಗರದ ವಲ್ಲಭಭಾಯಿ ರಸ್ತೆಯಿಂದ ಬನಶಂಕರಿ ದೇವಾಂಗ ಸಂಘದವರೆಗೆ ಸಾಗಲಿದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.

ದೇವಾಂಗ ಜಗದ್ಗುರು ಹಂಪೆ ಹೇಮಕೂಟ ಗಾಯತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ರಾಜ್ಯಸಭಾ ಸದಸ್ಯ ಕೆ. ನಾರಾಯಣ್ ಸಭಾಂಗಣ ಉದ್ಘಾಟಿಸಲಿದ್ದಾರೆ. ಶಾಸಕ ಸ್ವರೂಪ್ ಪ್ರಕಾಶ್, ಮಾಜಿ ಶಾಸಕ ಪ್ರೀತಂ ಜೆ. ಗೌಡ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತಿಯಲ್ಲಿ ಸಂಘದ ಅಧ್ಯಕ್ಷ ವಿ.ಎ. ನಂಜುಂಡಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ತಹಶೀಲ್ದಾರ್ ಗೀತಾ, ಮಹಾನಗರ ಪಾಲಿಕೆ ಆಯುಕ್ತ ಕೃಷ್ಣಮೂರ್ತಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಮೇ 8 ಮತ್ತು 9ರಂದು ಬಾದಾಮಿ ಬನಶಂಕರಿಯಲ್ಲಿ ದೇವಾಂಗ ಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿ ಅವರ 36ನೇ ವರ್ಷದ ಪಟ್ಟಾಭಿಷೇಕ ಕಾರ್ಯಕ್ರಮ ಜರುಗಲಿದೆ ಎಂದು ಮಾಹಿತಿ ನೀಡಿದರು. ಆನಂದ್, ಪ್ರಕಾಶ್, ಶಿವರುದ್ರಪ್ಪ, ರಾಜಶೆಟ್ಟಿ, ಮನೋಹರ್, ಕೃಷ್ಣಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-36-824163264

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.