ಹಾಸನ: ಜಿಲ್ಲೆಯ ಮಟ್ಟಿಗೆ ನಿರಾಶಾದಾಯಕ ಬಜೆಟ್ ಇದಾಗಿದ್ದು, ಸಣ್ಣ ಯೋಜನೆಗಳ ನೆರಳಿನಲ್ಲಿ, ದೊಡ್ಡ ಯೋಜನೆಗಳು ಇಲ್ಲದಂತಾಗಿವೆ. ಹಾಸನ ಮಹಾನಗರ ಪಾಲಿಕೆಗೆ ₹200 ಕೋಟಿ ಕೊಟ್ಟಿದ್ದು ಬಿಟ್ಟರೆ, ವಿಮಾನ ನಿಲ್ದಾಣ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಪ್ರವಾಸೋದ್ಯಮ ಸೇರಿದಂತೆ ಯಾವುದೇ ಕ್ಷೇತ್ರಕ್ಕೆ ಗಣನೀಯ ಕೊಡುಗೆ ಸಿಕ್ಕಿಲ್ಲ.

ವರ್ಷ ಪೂರೈಸಿರುವ ಇಲ್ಲಿನ ಮಹಾನಗರ ಪಾಲಿಕೆಗೆ ಇದೀಗ ₹200 ಕೋಟಿ ನೀಡಿರುವುದು ಅಷ್ಟಿಷ್ಟು ಉಸಿರಾಡುವಂತಾಗಿದೆ. ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸುತ್ತಲಿನ 25ಕ್ಕೂ ಅಧಿಕ ಗ್ರಾಮಗಳನ್ನು ಸೇರ್ಪಡೆ ಮಾಡಲಾಗಿದ್ದು, ಈ ಗ್ರಾಮಗಳ ಅಭಿವೃದ್ಧಿಗೆ ಇಷ್ಟು ಅನುದಾನ ಸಾಲುವುದಿಲ್ಲ ಎನ್ನುವ ಮಾತುಗಳೂ ಕೇಳಿ ಬರುತ್ತಿವೆ.

ಇನ್ನುಳಿದಂತೆ ಕೆಲವೇ ಕೆಲವು ಯೋಜನೆಗಳನ್ನು ಜಿಲ್ಲೆಗೆ ನೀಡಲಾಗಿದೆ. ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಳ್ಳಲು ಬೇಕಿದ್ದ ₹143 ಕೋಟಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆರಂಭಕ್ಕೆ ಅಗತ್ಯವಿರುವ ಅನುದಾನವನ್ನೂ ನೀಡಿಲ್ಲ. ಜೊತೆಗೆ ಬೇಲೂರು, ಹಳೇಬೀಡು, ಸಕಲೇಶಪುರ ತಾಲ್ಲೂಕಿನ ನಿಸರ್ಗ ಪ್ರವಾಸೋದ್ಯಮಗಳನ್ನು ಕಡೆಗಣಿಸಲಾಗಿದೆ ಎನ್ನುವ ದೂರುಗಳು ಕೇಳಿ ಬರುತ್ತಿವೆ.

ಅರಕಲಗೂಡು ತಾಲೂಕು ಮಲ್ಲಿಪಟ್ಟಣ ಯೋಜನೆ, ದುದ್ದ ಮತ್ತು ಶಾಂತಿಗ್ರಾಮ ಕುಡಿಯುವ ನೀರಿನ ಯೋಜನೆ, ಚನ್ನರಾಯಪಟ್ಟಣದ ಅಮಾನಿಕೆರೆ ಕುಡಿಯುವ ನೀರಿನ ಯೋಜನೆ, ದುದ್ದ ಮತ್ತು ಜÁವಗಲ್ ಹೋಬಳಿಯ 45 ಕೆರೆ ತುಂಬಿಸುವ ಯೋಜನೆ ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ124 ಕೆರೆ ತುಂಬಿಸುವ ಯೋಜನೆಗಳನ್ನು 2026-27ನೇ ಸಾಲಿನಲ್ಲಿ ಮುಕ್ತಾಯಗೊಳಿಸುವುದಾಗಿ ಬಜೆಟ್ನಲ್ಲಿ ತಿಳಿಸಲಾಗಿದೆ.

ಚನ್ನರಾಯಪಟ್ಟಣ ತಾಲ್ಲೂಕಿನ 18 ಕೆರೆಗಳನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ತುಂಬಿಸುವ ಯೋಜನೆ, ಅರಸೀಕೆರೆ ತಾಲ್ಲೂಕಿನಲ್ಲಿ ಎತ್ತಿನಹೊಳೆ ಗುರುತ್ವ ಕಾಲುವೆ ಅಡಿಯಲ್ಲಿ 9 ಕೆರೆಗಳ ಸುಧಾರಣೆ ಕಾಮಗಾರಿ, ಹೇಮಾವತಿ ಎಡದಂಡೆ ಕಾಲುವೆ ಅಡಿಯಲ್ಲಿ ಪುನರ್ ನಿರ್ಮಾಣ, ಹೇಮಾವತಿ ನದಿಯಿಂದ ನಾಗಮಂಗಲ ಹಾಗೂ ಚನ್ನರಾಯಪಟ್ಟಣ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಕೆರೆ ಅಭಿವೃದ್ಧಿ ಕಾಮಗಾರಿ, ಅರಸೀಕೆರೆ ತಾಲ್ಲೂಕಿನ ಜಾವಗಲ್ ಭಾಗದಲ್ಲಿ ಎರಡು ಕಡೆ ಚೆಕ್ ಡ್ಯಾಂ ನಿರ್ಮಾಣ, ಅರಕಲಗೂಡು ತಾಲ್ಲೂಕಿನ ಕೆಂಚನಕಟ್ಟೆಯಲ್ಲಿ ಚೆಕ್ ಡ್ಯಾಂ ನಿರ್ಮಾಣ, ಸಾಲಗಾಮೆಯಲ್ಲಿ ಚೆಕ್ ಡ್ಯಾಂ ಕಂ ಬ್ರಿಡ್ಜ್ ನಿರ್ಮಾಣ, ಸಕಲೇಶಪುರ ತಾಲ್ಲೂಕಿನ ರಾವುತನಹಳ್ಳಿ ಏತ ನೀರಾವರಿ ನಾಲೆ ಆಧುನೀಕರಣ ಹಾಗೂ ಸಕಲೇಶಪುರ ತಾಲ್ಲೂಕಿನ ಐಗೂರು ಕೆರೆ ಅಭಿವೃದ್ಧಿಗೆ ಉದ್ದೇಶಿಸಲಾಗಿದೆ. ಅರಸೀಕೆರೆ ತಾಲ್ಲೂಕಿನ ಮಾಯಕೊಂಡದಲ್ಲಿ ಶ್ರಮಿಕ ವಸತಿ ಶಾಲೆ ತೆರೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಲೋಕೋಪಯೋಗಿ ಇಲಾಖೆಯಡಿ ಮಡಿಕೇರಿ-ದೋಣಿಗಲ್ (ಮಾದಾಪುರ, ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ ಮಾರ್ಗ) 95 ಕಿ.ಮೀ ಕಾಮಗಾರಿ, ಶ್ರೀರಂಗಪಟ್ಟಣ (ಪಾಂಡವಪುರ ರೈಲ್ವೆ ನಿಲ್ದಾಣ)-ಬಿ.ಎಂ. ರೋಡ್ ಜಂಕ್ಷನ್ ಚನ್ನರಾಯಪಟ್ಟಣ (ಕೆ.ಆರ್.ಪೇಟೆ ಮಾರ್ಗ) 63 ಕಿ.ಮೀ. ಕಾಮಗಾರಿ ಮಾಡುವುದಾಗಿ ಸರ್ಕಾರ ಹೇಳಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ 50:50 ಅನುಪಾತದಡಿ ನಡೆಯುತ್ತಿರುವ ಬೇಲೂರು-ಹಾಸನ, ಚಿಕ್ಕಮಗಳೂರು-ಬೇಲೂರು ರೈಲ್ವೆ ಕಾಮಗಾರಿಗಳಿಗೆ ಭೂಸ್ವಾಧೀನ ಪ್ರಕಟಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260307-36-1201122399

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.