ಹಾಸನ: ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಸೋಮವಾರ ನಗರದ ಲಕ್ಷ್ಮೀಪುರ ಬಡಾವಣೆ, ಎಸ್.ವಿ.ಎಂ. ಸ್ಕೂಲ್ ಹಿಂಭಾಗ ಹಾಗೂ ಪೆನ್ಷನ್ ಮೊಹಲ್ಲಾಗೆ ಭೇಟಿ ನೀಡಿ ಗಣತಿದಾರರೊಂದಿಗೆ ಮನೆಗೆ ಹೋಗಿ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ‘ಜನಗಣತಿ 2027 ದೇಶದಾದ್ಯಂತ ನಡೆಯುತ್ತಿದೆ. ಅದೇ ರೀತಿ ಹಾಸನ ಜಿಲ್ಲೆಯಲ್ಲಿ ಗಣತಿ ಕಾರ್ಯ ನಡೆಯುತ್ತಿದೆ. ಗಣತಿದಾರರು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಕೇಳುವ ಸರಳ 34 ಪ್ರಶ್ನೆಗಳಿಗೆ ಉತ್ತರ ನೀಡಿ, ಕೇವಲ 5 ನಿಮಿಷದಲ್ಲಿ ಗಣತಿ ಕಾರ್ಯ ಮುಗಿಯುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು’ ಎಂದು ಕೋರಿದರು.

‘ಪ್ರಸ್ತುತ ಬಿಸಿಲು ಹೆಚ್ಚಾಗಿರುವುದರಿಂದ ಗಣತಿದಾರರು ಬೆಳಿಗ್ಗೆ 6 ಗಂಟೆಗೆ ಬರುತ್ತಾರೆ. ಅವರಿಗೆ ಮಾಹಿತಿ ನೀಡಿ’ ಎಂದ ಅವರು, ‘ಕೆಲವು ಕಡೆಗಳಲ್ಲಿ ಮಾಹಿತಿ ನೀಡಲು ಅನುಮಾನಿಸುತ್ತಿರುವುದು ಕಂಡುಬಂದಿದೆ. ಆ ರೀತಿ ಅನುಮಾನ ಬಂದಲ್ಲಿ ಗಣತಿದಾರರಿಗೆ ಗುರುತಿನ ಕಾರ್ಡ್ ನೀಡಲಾಗಿದೆ. ಅದರಲ್ಲಿ ಕ್ಯೂ ಆರ್ ಕೋಡ್ ಇದೆ. ಅದನ್ನು ಸ್ಕ್ಯಾನ್ ಮಾಡಿದರೆ ಗಣತಿದಾರರ ಹೆಸರು ಮತ್ತು ಇತರೆ ಮಾಹಿತಿ ದೊರೆಯಲಿದೆ’ ಎಂದು ಹೇಳಿದರು.

ಜನಗಣತಿ ದೇಶದ ಶಾಸನಬದ್ಧ ಕರ್ತವ್ಯ ಪ್ರತಿಯೊಬ್ಬ ನಾಗರಿಕರು ಗೌರವಯುತವಾಗಿ ಗಣತಿದಾರರಿಗೆ ಮಾಹಿತಿ ನೀಡಿ ಸಹಕರಿಸಿ ಎಂದು ತಿಳಿಸಿದ್ದಾರೆ.

ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ, ಮಹಾನಗರ ಪಾಲಿಕೆಯ ಆಯುಕ್ತ ಕೃಷ್ಣಮೂರ್ತಿ, ತಹಶೀಲ್ದಾರ್ ಗೀತಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-36-1558149550

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.