ಹಾಸನ: ಒಲ್ಲದ ಮನಸ್ಸಿನಿಂದಲೇ ಹಾಸನ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದ ಕೆ.ಎನ್. ರಾಜಣ್ಣ ಅವರಿಗೆ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ನೀಡಲಾಗಿದೆಯೇ? ಅವರ ಬದಲು ಕೃಷ್ಣ ಬೈರೇಗೌಡರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆಯೇ ಎನ್ನುವ ಚರ್ಚೆಗಳು ಜೋರಾಗಿವೆ.

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಬದಲು ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಜವಾಬ್ದಾರಿ ನೀಡಲಾಗಿದ್ದು, ಇಂತಹ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

‘ನನಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬೇಡ. ಈ ಬಗ್ಗೆ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು, ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ’ ಎಂದು 8 ತಿಂಗಳ ಹಿಂದೆಯೇ ಸಚಿವ ರಾಜಣ್ಣ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಇದಾದ ನಂತರ ಅವರು ಜಿಲ್ಲೆಗೆ ಬರುವುದೇ ಅಪರೂಪ ಎನ್ನುವಂತಾಗಿತ್ತು.

ಸೂಕ್ತ ಸ್ಥಾನಮಾನ ದೊರಕಿಸದೇ ಇದ್ದುದರಿಂದ ಜಿಲ್ಲೆಯ ಕಾಂಗ್ರೆಸ್ ಮುಖಂಡರೂ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಅವರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರನ್ನು ಉಸ್ತುವಾರಿಯಿಂದ ಬದಲಿಸಬೇಕು ಎನ್ನುವ ಬೇಡಿಕೆಯನ್ನು ಇಟ್ಟಿದ್ದರು.

ಅದಾಗ್ಯೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವರನ್ನು ಬದಲಿಸುವ ಗೋಜಿಗೆ ಹೋಗಿರಲಿಲ್ಲ. ಇದೀಗ ಹುಡಾ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಕಾರ್ಯಕರ್ತರ ಅಸಮಾಧಾನ ಭುಗಿಲೆದ್ದಿದೆ.

‘ಅನ್ಯ ಕ್ಷೇತ್ರದವರನ್ನು ಹಾಸನ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನಾಗಿ ನೇಮಿಸಲು ಮುಖ್ಯಮಂತ್ರಿ ಮುಂದಾಗಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸ್ವತಃ ರಾಜಣ್ಣ ಅವರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಚರ್ಚೆ ನಡೆಸಿದ್ದಾರೆ. ಆದರೆ, ಸಿದ್ದರಾಮಯ್ಯ ತಮ್ಮ ನಿರ್ಧಾರವನ್ನು ಬದಲಿಸಲು ಸಿದ್ಧರಿಲ್ಲ. ಹೀಗಾಗಿ ಸಚಿವ ರಾಜಣ್ಣ ಕೂಡ ಮುನಿಸುಗೊಂಡಿದ್ದಾರೆ. ಈ ಹಂತದಲ್ಲಿ ಹಾಸನ ಜಿಲ್ಲೆಗೆ ತೆರಳಿ, ಉಸ್ತುವಾರಿ ಸಚಿವ ಸ್ಥಾನ ನಿಭಾಯಿಸುವುದು ಕಷ್ಟ ಎನ್ನುವುದು ಸಚಿವ ರಾಜಣ್ಣ ಅವರಿಗೂ ಗೊತ್ತಾಗಿದೆ. ಹೀಗಾಗಿ ಕೃಷ್ಣ ಬೈರೇಗೌಡರಿಗೆ ಧ್ವಜಾರೋಹಣದ ಅವಕಾಶ ನೀಡಿರಬಹುದು’ ಎಂದು ಕಾಂಗ್ರೆಸ್ನ ಮುಖಂಡರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಮಧ್ಯೆ ಕೃಷ್ಣ ಬೈರೇಗೌಡರಿಗೂ ಹಾಸನ ಜಿಲ್ಲೆಯ ಉಸ್ತುವಾರಿ ವಹಿಸಿಕೊಳ್ಳುವ ಮನಸ್ಸಿಲ್ಲ. ‘ಹುಡಾ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಸ್ಪಷ್ಟ ನಿರ್ಧಾರ ಹೊರಬೀಳುವವರೆಗೆ ಅಧಿಕೃತವಾಗಿ ಉಸ್ತುವಾರಿ ಸಚಿವರನ್ನಾಗಿ ಘೋಷಿಸದಂತೆ ಮುಖ್ಯಮಂತ್ರಿ ಬಳಿಯೂ ಹೇಳಿಕೊಂಡಿದ್ದಾರೆ’ ಎನ್ನುವ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.