ಹಾಸನ: ‘ಇರುವುದು ಒಂದೇ ಭೂಮಿ. ನಾವೆಲ್ಲರೂ ಅದನ್ನು ಬಹಳ ಜೋಪಾನವಾಗಿ ಕಾಪಾಡಿಕೊಳ್ಳುವ ಹೊಣೆ ನಮ್ಮೆಲ್ಲರದ್ದು’ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಂ.ಶೈಲಾ ತಿಳಿಸಿದರು.

ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಏಕಲವ್ಯ ಮುಕ್ತ ದಳದ ಆಶ್ರಯದಲ್ಲಿ ಶುಕ್ರವಾರ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಮ್ಮ ಪೂರ್ವಿಕರು ಪ್ರಕೃತಿಯ ಜೊತೆಗೆ ಸಹಬಾಳ್ವೆ ನಡೆಸುತ್ತ, ನೂರಾರು ವರ್ಷಗಳ ಕಾಲ ಆನಂದ ಮತ್ತು ಆರೋಗ್ಯದಿಂದ ಬದುಕಿ, ಈ ಭೂಮಿಯನ್ನು ಹಾಳು ಮಾಡದೇ ನಮಗೆ ಬಳುವಳಿಯಾಗಿ ನೀಡಿದ್ದರು. ಪ್ರಸ್ತುತ ಜಾಗತಿಕ ತಾಪಮಾನ ಹೆಚ್ಚಾಗಿದ್ದು, ಜೀವಸಂಕುಲ ನಾನಾ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ನಾವೆಲ್ಲರೂ ಈಗಲೇ ಎಚ್ಚೆತ್ತುಕೊಂಡು ಪರಿಸರ ರಕ್ಷಣೆಗೆ ಮುಂದಾಗಬೇಕು. ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪೋಷಿಸುವ ಮಹತ್ತರ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರವಿಕುಮಾರ್ ಎಚ್.ಆರ್., ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ.ಎಂ. ಪುಟ್ಟಸ್ವಾಮಿ, ಹಿರಿಯ ವಿಭಾಗದ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಚ್.ವಿ. ಅನಿತಾ, ಕಿರಿಯ ವಿಭಾಗದ ಒಂದನೇ ಅಧಿಕ ಸಿವಿಲ್ ನ್ಯಾಯಾಧೀಶ ಎಸ್. ಸೂರ್ಯನಾರಾಯಣ, ಮೂರನೇ ಅಧಿಕ ಸಿವಿಲ್ ನ್ಯಾಯಾಧೀಶ ಎ.ಕಾಜಲ್ ವಿವಿಧ ಜಾತಿಯ ಹಣ್ಣಿನ ಗಿಡ ನೆಟ್ಟರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕಾರ್ಲೆ ಮೊಗಣ್ಣಗೌಡ, ಉಪಾಧ್ಯಕ್ಷ ಎಂ.ಟಿ.ತಿಮ್ಮೇಗೌಡ, ಜಂಟಿ ಕಾರ್ಯದರ್ಶಿ ಎ.ಜೆ.ರಘು, ಸದಸ್ಯ ವಿ.ಆರ್.ಗುಡ್ಡೇಗೌಡ, ಆರ್.ಜೆ.ಗಿರೀಶ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-36-1761941405

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.