ಹಾಸನ: ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿ ಹಾಗೂ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸೌಂದರ್ಯೀಕರಣ ಮಾಡಬೇಕು. ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಅತಿ ಹೆಚ್ಚು ಗಿಡಗಳನ್ನು ಬೆಳೆಸಿ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಹಸಿರು ಹಾಸನ 2026 ಕುರಿತು ಸಭೆ ನಡೆಸಿ ಅವರು ಮಾತನಾಡಿದರು.

ಹಸಿರು ಹಾಸನ ಅಭಿಯಾನದಡಿ ಗಿಡಗಳನ್ನು ಬೆಳೆಸಲು ಮಳೆಗಾಲ ಪ್ರಾರಂಭವಾಗುವುದಕ್ಕಿಂತ ಮುನ್ನ ಸಿದ್ಧತೆ ಮಾಡಿಕೊಳ್ಳಬೇಕು. ಕೆರೆ ಏರಿಗಳು, ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಕ್ರೀಡಾಂಗಣದ ಆವರಣ, ಆಟದ ಮೈದಾನಗಳು, ಉದ್ಯಾನದ ಸುತ್ತ, ರಾಷ್ಟ್ರೀಯ, ರಾಜ್ಯ ಹೆದ್ದಾರಿ ಅಕ್ಕ ಪಕ್ಕದಲ್ಲಿ, ರಸ್ತೆ ವಿಭಜಕ, ಆಸ್ಪತ್ರೆ ಆವರಣ, ಖಾಲಿ ಇರುವ ಸರ್ಕಾರಿ ಜಾಗದಲ್ಲಿ 5 ಲಕ್ಷ ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂದರು.

ನಗರದ ಎಲ್ಲೆಂದರಲ್ಲಿ ತ್ಯಾಜ್ಯ ವಿಲೇವಾರಿ ಮಾಡುವವರಿಗೆ ದಂಡ ವಿಧಿಸಬೇಕು. ಚರಂಡಿಗಳನ್ನು ಸ್ವಚ್ಛಗೊಳಿಸಬೇಕು, ಕುಡಿಯುವ ನೀರು ಕಲುಷಿತ ಆಗಬಾರದು. ನೀರಿನ ಗುಣ್ಣಮಟ್ಟವನ್ನು ಪರೀಕ್ಷಿಸಬೇಕು ಎಂದು ತಿಳಿಸಿದರು.

ನಗರೋತ್ಥಾನ ಯೋಜನೆಯಡಿ ಮಂಜೂರಾದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದ ಅವರು, ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಆಗದಂತೆ ಎಚ್ಚರ ವಹಿಸಬೇಕು ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರಮುನಿ, ನಗರ ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-36-1579102758

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.