ಹಾಸನ: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸಾಲ ಪಡೆದ ರೈತರ ಭೂಮಿಯನ್ನು ಆನ್ಲೈನ್ ಮೂಲಕ ಹರಾಜು ಮಾಡುವ ಪ್ರಕ್ರಿಯೆ ನಿಲ್ಲಬೇಕು. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನೂರಾರು ರೈತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಎದುರು ಸಂಘಟಿತರಾದ ನೂರಾರು ರೈತರು ಹಾಗೂ ಮುಖಂಡರು ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಎನ್.ಅರ್. ವೃತ್ತದ ಮೂಲಕ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿ ಮನವಿ ಸಲ್ಲಿಸಿದರು.

ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ‘ಜಿಲ್ಲೆಯ ಅರೇಹಳ್ಳಿ ಕೆನರಾ ಬ್ಯಾಂಕ್ನಲ್ಲಿ ಸಾಲ ಪಡೆದಿದ್ದ ಕಾಫಿ ಬೆಳೆಗಾರರ ಸಾಲ ವಸೂಲಾತಿಗಾಗಿ ಆನ್ಲೈನ್ ಮೂಲಕ ಭೂಮಿಯನ್ನು ಹರಾಜು ಮಾಡುತ್ತಿದ್ದು, ಇದನ್ನು ಸಂಘ ಬಲವಾಗಿ ಖಂಡಿಸುತ್ತದೆ. ರೈತರು, ಕಾಫಿ ಬೆಳೆಗಾರರು ಅತಿವೃಷ್ಟಿ, ಅನಾವೃಷ್ಟಿ, ಕಾಡಾನೆ ಹಾವಳಿಯಿಂದ ತತ್ತರಿಸಿ ಹೋಗಿದ್ದಾರೆ. ಈ ನಡುವೆ ರೈತರಿಗೆ ಉತ್ತಮ ಬೆಳೆಯೂ ಸಿಗುತ್ತಿಲ್ಲ. ಆದರೆ ಬ್ಯಾಂಕ್ಗಳು ಏಕಾಏಕಿ ನೋಟಿಸ್ ನೀಡಿ ಸರ್ಫೇಸಿ ಕಾಯ್ದೆ ಅನ್ವಯ ಜಮೀನನ್ನು ಹರಾಜು ಹಾಕಲು ಮುಂದಾಗಿವೆ’ ಎಂದು ದೂರಿದರು.

‘ರಾಷ್ಟ್ರೀಕೃತ ಬ್ಯಾಂಕ್ಗಳ ಇಂತಹ ನೀತಿಗಳಿಂದಾಗಿ ಕೇವಲ 2–3 ಎಕರೆ ಹೊಂದಿರುವ ಬಡ ರೈತರು ಜಮೀನು ಕಳೆದುಕೊಂಡು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಈ ಕುರಿತು ಶೀಘ್ರ ಗಮನಹರಿಸಬೇಕು. ರೈತರ ಭೂಮಿಯನ್ನು ರಕ್ಷಿಸಬೇಕು’ ಎಂದು ಆಗ್ರಹಿಸಿದರು.

‘ರಾಷ್ಟ್ರೀಕೃತ ಬ್ಯಾಂಕ್ಗಳು ಯಾವುದೇ ಕಾರಣಕ್ಕೂ ರೈತರ ಕೃಷಿ ಭೂಮಿಯನ್ನು ಹರಾಜು ಮಾಡಲು ರೈತ ಸಂಘ ಬಿಡುವುದಿಲ್ಲ. ಮನವಿಗೆ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಆಲೂರು ತಾಲ್ಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿ ಮಗ್ಗೆ ಹೊಸಮಠ ಗ್ರಾಮದಲ್ಲಿ ಶಿಲುಬೆ ಬೆಟ್ಟದಲ್ಲಿ ಬಂಡೆ ಒಡೆಯುವುದನ್ನು ನಿಲ್ಲಿಸಬೇಕು. ಇದರಿಂದ ಕಾಡಾನೆ, ಕಾಡುಪ್ರಾಣಿಗಳು ಗ್ರಾಮಕ್ಕೆ ದಾಳಿ ಇಡುತ್ತಿವೆ. ಬೆಳೆಗಳನ್ನು ನಾಶ ಮಾಡುತ್ತಿವೆ. ಶಿಲುಬೆಬೆಟ್ಟ ಪವಿತ್ರ ಸ್ಥಳವಾಗಿರುವುದರಿಂದ ಈ ಜಾಗದಲ್ಲಿ ಗಣಿಗಾರಿಕೆ ನಡೆದಂತೆ ಕೂಡಲೇ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ರೈತರು ಮೆಕ್ಕೆಜೋಳವನ್ನು ದೊಡ್ಡ ಮಟ್ಟದಲ್ಲಿ ಬೆಳೆದಿದ್ದಾರೆ. ರೈತರ ಜೋಳವನ್ನು ಮಾರಾಟ ಮಾಡಲು ಹೋದಾಗ ಕೆಎಂಎಫ್ನಲ್ಲಿ ಖರೀದಿ ಮಾಡುತ್ತಿಲ್ಲ. ಕಳಪೆ ಬೀಜದಿಂದಾಗಿ ಜೋಳದ ಗುಣಮಟ್ಟ ಇಲ್ಲವಾಗಿದ್ದು, ಜೋಳ ಮಾರಲು ರೈತರಿಗೆ ಕಷ್ಟವಾಗಿದೆ. ಕೂಡಲೇ ಸರ್ಕಾರ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕು. ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡರಾದ ಆನೆಕೆರೆ ರವಿ, ಬಾಬು, ಮೊಹಮ್ಮದ್ ಸಾದಿಕ್, ಜಯಣ್ಣ, ಶಿವರಾಮೇಗೌಡ, ಪವಿತ್ರ, ಕಾಳಯ್ಯ, ಲಕ್ಷ್ಮೀಶ, ರುದ್ರಮ್ಮ, ಕಮಲಮ್ಮ ಸೇರಿದಂತೆ ನೂರಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.