ಹಾಸನ: ರೈತರಿಗೆ ನಿರಂತರ ಮೂರು-ಫೇಸ್ ವಿದ್ಯುತ್ ಪೂರೈಕೆ ಮಾಡದಿರುವುದನ್ನು ಖಂಡಿಸಿ ಹಾಗೂ ಲೈನ್ಮನ್ಗಳ ದುರ್ವರ್ತನೆ ವಿರುದ್ಧ ಏ.1ರಂದು ಹಳೇಬೀಡಿನ ಕೆಇಬಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆರ್ಪಿಐ ರಾಜ್ಯ ಘಟಕದ ಅಧ್ಯಕ್ಷ ಆರ್ಪಿಐ ಸತೀಶ್ ತಿಳಿಸಿದ್ದಾರೆ.

‘ಬೇಲೂರು ತಾಲ್ಲೂಕಿನ ಹಳೇಬೀಡು ಹೋಬಳಿ ಗಂಗೂರು ಎಂಯುಎಸ್ಎಸ್ ಘಟಕದ ವ್ಯಾಪ್ತಿಯ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಪ್ರತಿದಿನ ಕೇವಲ 2-3 ಗಂಟೆಗಳಷ್ಟೇ ವಿದ್ಯುತ್ ನೀಡಲಾಗುತ್ತಿದ್ದು, ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.

ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸರ್ಕಾರ ನಿರಂತರ ಮೂರು-ಫೇಸ್ ವಿದ್ಯುತ್ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಇದುವರೆಗೂ ಆ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದರು.

‘ಹಳೇಬೀಡಿನ ಹೊಯ್ಸಳ ವೃತ್ತದಿಂದ ಕೆಇಬಿ ಕಚೇರಿವರೆಗೆ ಪ್ರತಿಭಟನೆ ನಡೆಯಲಿದ್ದು, ಸ್ಥಳೀಯ ರೈತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಗಂಗೂರು ಮಹೇಶ್, ಮೂಡಲಗಿರಿ ಗೌಡ, ರತೀಶ್ ಅಪ್ಪ ಗೌಡನಹಳ್ಳಿ, ಹಳೇಬೀಡು ಲಿಂಗರಾಜು, ಗಂಗೂರು ರಂಗಸ್ವಾಮಿ ಜಿ.ಆರ್. ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-36-479248973

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.