ಹಾಸನ: ನಗರಕ್ಕೆ ಹೊಂದಿಕೊಂಡಂತೆ ಇರುವ ಶಾಂತಿಗ್ರಾಮ ಹೋಬಳಿಯ ಮಡೆನೂರಿನ ಸರ್ವೆ ನಂ. 298ರಲ್ಲಿರುವ 100 ಎಕರೆ ಅರಣ್ಯ ಭೂಮಿಯನ್ನು ಕೂಡಲೇ ವಶಕ್ಕೆ ಪಡೆದು ನೆಡುತೋಪು ಬೆಳೆಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.

ಬೆಂಗಳೂರಿನಲ್ಲಿ ಶನಿವಾರ ಹಿರಿಯ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಶುಕ್ರವಾರ ಬೇಲೂರು ಪ್ರವಾಸದ ವೇಳೆ ಹಾಸನದ ಕೃಷಿ ಸಂಶೋಧನಾ ಕೇಂದ್ರ ಮತ್ತು ಜೈವಿಕ ಇಂಧನ ಘಟಕದ ಸಮೀಪ ಇರುವ ಕೋಟ್ಯಂತರ ರೂಪಾಯಿ ಬೆಲೆಬಾಳುವ ಭೂಮಿಯ ವೀಕ್ಷಣೆ ಮಾಡಿದ್ದು, ಈ ಅರಣ್ಯ ಭೂಮಿ ಸಂರಕ್ಷಣೆಗೆ ಆದೇಶ ನೀಡಿದರು.

ನೂರು ಎಕರೆ ಭೂಮಿಯನ್ನು 2015-16ರಲ್ಲಿ ಅರಣ್ಯ ಇಲಾಖೆ ಪರವಾಗಿ ಮ್ಯುಟೇಷನ್ ಮಾಡಿ, ಪಹಣಿ ಆಗಿದೆ. ಆದಾಗ್ಯೂ ಅಲ್ಲಿ ಈವರೆಗೆ ಅರಣ್ಯೀಕರಣ ಮಾಡಿ ಉತ್ತಮ ವಾತಾವರಣ ನಿರ್ಮಿಸದ ಬಗ್ಗೆ ಬೇಸರ ವ್ಯಕ್ತಪಡಿಸಿದರು.

2024ರಲ್ಲೇ ಈ ಜಮೀನನ್ನು ವಶಕ್ಕೆ ಪಡೆದು ಸ್ಥಳೀಯ ಪ್ರಭೇದದ ಗಿಡ ನೆಡುವಂತೆ ಸೂಚಿಸಿದ್ದರೂ ಈವರೆಗೆ ಕ್ರಮ ಕೈಗೊಳ್ಳದೇ ವಿಳಂಬ ಮಾಡಿರುವ ಬಗ್ಗೆ ವರದಿ ನೀಡುವಂತೆ ತಾಕೀತು ಮಾಡಿದರು.

2015ರ ನಂತರ ಆಗಿರುವ ಎಲ್ಲ ಅರಣ್ಯಭೂಮಿ ಒತ್ತುವರಿ ತೆರವಿಗೆ ಹಲವು ಬಾರಿ ಸೂಚಿಸಿದ್ದರೂ, ಕ್ರಮ ಏಕೆ ಆಗಿಲ್ಲ ಎಂದು ಪ್ರಶ್ನಿಸಿದ ಅವರು, ಪ್ರಸ್ತುತ ಖಾಲಿ ಇರುವ ಅರಣ್ಯ ಭೂಮಿಯನ್ನು ಕೂಡಲೇ ವಶಕ್ಕೆ ಪಡೆದು ಬೇಲಿ ಹಾಕಲು ಮತ್ತು ಒತ್ತುವರಿ ಆಗಿರುವ ಅರಣ್ಯ ಭೂಮಿ ತೆರವಿಗೆ ಕರ್ನಾಟಕ ಅರಣ್ಯ ಕಾಯ್ದೆಯ ಸೆಕ್ಷನ್ 64ಎ ಪ್ರಕ್ರಿಯೆ ನಡೆಸುವಂತೆಯೂ ನಿರ್ದೇಶನ ನೀಡಿದರು.

ಅರಣ್ಯ ಭೂಮಿಯಲ್ಲಿ ಗಿಡಮರ ಬೆಳೆಸದಿದ್ದರೆ ಮುಂದಿನ ಪೀಳಿಗೆ ಉಸಿರಾಡಲೂ ಕಷ್ಟಪಡಬೇಕಾಗುತ್ತದೆ. ಪ್ರಕೃತಿ, ಪರಿಸರ ಉಳಿಸಲು ರಾಜ್ಯದ ಎಲ್ಲ ನಗರ ಮತ್ತು ಪಟ್ಟಣ ಪ್ರದೇಶದ ಸಮೀಪದ ಅರಣ್ಯ ಭೂಮಿ ಒತ್ತುವರಿ ಆಗದಂತೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಜಾಗೃತದಳ ಮತ್ತು ಸಾಮಾಜಿಕ ಅರಣ್ಯ) ಮನೋಜ್ ತ್ರಿಪಾಠಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಡಿಸಿಎಫ್ ರವೀಂದ್ರ ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.