ಬೆಂಗಳೂರು: ಹಾಸನ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಸರಕು ಲಾರಿ ನುಗ್ಗಿದ್ದು, ಕನಿಷ್ಠ 9 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು, ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು ಎಂದಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಹೇಳಿದ್ದಾರೆ.

ಘಟನೆ ಆಗಿದ್ದು ಹೇಗೆ?

ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿತ್ತು. ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ಯಾಂಟರ್ ಲಾರಿಗೆ ಬೈಕ್ ಅಡ್ಡ ಬಂದಿದೆ.

ಇದನ್ನು ತಪ್ಪಿಸಲು ಕ್ಯಾಂಟರ್ ಚಾಲಕ ಯತ್ನಿಸಿದ್ದಾನೆ. ಈ ವೇಳೆ ರಸ್ತೆ ವಿಭಜಕ ದಾಟಿದ ಕ್ಯಾಂಟರ್ ಲಾರಿ ಮೆರವಣಿಗೆ ಮೇಲೆ ಎರಗಿದೆ. ಈ ವೇಳೆ ಸ್ಥಳದಲ್ಲಿದ್ದ 9 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಘಟನೆಯಲ್ಲಿ ಮೃತರಾದ ವಿವರವನ್ನು ಸರ್ಕಾರ ಹಂಚಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.