ಹಾಸನ: ಹೂವಿನಹಳ್ಳಿ ಕಾವಲು ಗ್ರಾಮದಲ್ಲಿ ಮನೆಯ ಹೆಂಚು ತೆಗೆದು ಒಳನುಗ್ಗಿರುವ ಕಳ್ಳರು, ₹12.04 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ದೋಚಿದ್ದಾರೆ.

ಗ್ರಾಮದ ರಮೇಶ್ ಅವರು ಮೇ 31ರ ಬೆಳಿಗ್ಗೆ 9ಕ್ಕೆ ಮನೆಗೆ ಬೀಗ ಹಾಕಿ, ಜಮೀನಿಗೆ ತೆರಳಿದ್ದರು. ಸಂಜೆ 5.30ಕ್ಕೆ ವಾಪಸ್ ಬಂದು ನೋಡಿದಾಗ ಮನೆಯ ಹೆಂಚು ತೆಗೆದಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಕಬ್ಬಿಣದ ಬೀರುವನ್ನು ಮುರಿದು ಅದರಲ್ಲಿದ್ದ 114 ಗ್ರಾಂ ಚಿನ್ನದ ಆಭರಣಗಳು, 50 ಗ್ರಾಂನ 2 ಬೆಳ್ಳಿ ಸರಗಳು ಹಾಗೂ ₹1.02 ಲಕ್ಷ ನಗದು ಕಳವು ಮಾಡಿದ್ದು ಗೊತ್ತಾಗಿದೆ.

₹10.82 ಲಕ್ಷ ಮೌಲ್ಯದ ಚಿನ್ನಾಭರಣ, ₹20ಸಾವಿರ ಮೌಲ್ಯದ ಬೆಳ್ಳಿ ಸೇರಿದಂತೆ ಒಟ್ಟು ₹12.04 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿದೆ.

ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನ: ಹೊಳೆನರಸೀಪುರ ತಾಲ್ಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ಮನೆಯ ಬೀಗ ತೆಗೆದು, ₹4.79 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.

ಮಮತಾ ಅವರು ಪ್ರತಿದಿನ ಮನೆಗೆ ಬೀಗ ಹಾಕಿ, ಕೀಯನ್ನು ಬಾಗಿಲ ಪಕ್ಕದ ಚಿಕ್ಕ ಗೂಡಿನಲ್ಲಿ ಇಟ್ಟು ಕೆಲಸಕ್ಕೆ ತೆರಳುತ್ತಿದ್ದರು. ಇದನ್ನು ಬಳಸಿಕೊಂಡ ಕಳ್ಳರು, ಮನೆಯ ಕೀ ತೆಗೆದು ಬೀರುವಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದಾರೆ. ಮೇ 27ರಂದು ಬೀರುವಿನಿಂದ ಹಣ ತೆಗೆಯಲು ಹೋದಾಗ ಬೀರುವಿನ ಲಾಕರ್ ಮುರಿದಿದ್ದು, ಅದರಲ್ಲಿದ್ದ 31 ಗ್ರಾಂ ಚಿನ್ನದ ಒಡವೆಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-36-1556915393

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.