ಹಾಸನ: ಜಾಗತಿಕ ತಾಪಮಾನದಿಂದ ತೀವ್ರಗೊಳ್ಳುತ್ತಿರುವ ನಡುವೆ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕಾದ ಸಂದರ್ಭದಲ್ಲಿ, ಜಿಲ್ಲೆಯ ಹಸಿರೀಕರಣ ಅಭಿಯಾನಕ್ಕೆ ಬೇಕಾದ ಸಸಿಗಳೇ ಅರಣ್ಯ ಇಲಾಖೆಯ ಬಳಿ ಲಭ್ಯ ಇಲ್ಲದಿರುವುದು ಆತಂಕಕಾರಿ ಬೆಳವಣಿಗೆ ಎಂದು ಹಸಿರು ಭೂಮಿ ಪ್ರತಿಷ್ಠಾನದ ಸಂಸ್ಥಾಪಕ ಆರ್.ಪಿ. ವೆಂಕಟೇಶಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲಾಧಿಕಾರಿ ಜಿಲ್ಲೆಯಾದ್ಯಂತ ಐದು ಲಕ್ಷ ಗಿಡಗಳನ್ನು ನೆಟ್ಟು ಪೋಷಿಸುವ ಗುರಿ ಇಟ್ಟುಕೊಂಡು ವಿವಿಧ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳನ್ನು ಸಜ್ಜುಗೊಳಿಸುತ್ತಿರುವುದು ಸ್ವಾಗತಾರ್ಹ. ಆದರೆ ಹಸಿರೀಕರಣಕ್ಕೆ ಅಗತ್ಯವಾದ ಸಸಿಗಳು ಅರಣ್ಯ ಇಲಾಖೆಯಲ್ಲೇ ಲಭ್ಯವಿಲ್ಲದಿರುವುದು ವಿಪರ್ಯಾಸ ಎಂದು ಟೀಕಿಸಿದರು.

ಹಿಂದಿನ ವರ್ಷಗಳಲ್ಲಿ ಕೋಟ್ಯಂತರ ಸಸಿಗಳನ್ನು ನೆಟ್ಟು ಪೋಷಣೆ ಮಾಡದೇ ಸರ್ಕಾರದ ಹಣ ವ್ಯರ್ಥವಾಗಿದೆ ಎಂಬ ಆರೋಪಗಳ ನಂತರ ಸಸಿಗಳ ಉತ್ಪಾದನೆಯನ್ನು ಗಣನೀಯವಾಗಿ ಕಡಿಮೆ ಮಾಡಲಾಗಿದೆ ಎಂದು ದೂರಿದರು.

ನೀಲಗಿರಿ ಗಿಡ ನೆಡುವುದಕ್ಕೆ ನಮ್ಮ ವಿರೋಧವಿದೆ. ಈಗಾಗಲೇ ಬುರುಡಾಳು ಬಾರೆ ಸುತ್ತಮುತ್ತ ಸುಮಾರು 350 ಎಕರೆ ಪ್ರದೇಶದಲ್ಲಿ ಇರುವ ನೀಲಗಿರಿ ಮರಗಳನ್ನು ಬೇರು ಸಮೇತ ಕೀಳುವ ಕಾರ್ಯ ಪ್ರಗತಿಯಲ್ಲಿದೆ. ಅರಣ್ಯ ಇಲಾಖೆ ಇದೇ ಪ್ರದೇಶದಲ್ಲಿ 1.50 ಲಕ್ಷ ಗಿಡ ನೆಡುವ ಯೋಜನೆ ರೂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಿದರು.

ಎಂ.ಬಿ. ಗಿರಿಜಾಂಬಿಕಾ, ಪಿ. ಪುರುಷೋತ್ತಮ್, ಎಂ.ಆರ್. ಚಂದ್ರಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-36-922508989

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.