ಹಾಸನ: ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ, ಭೂಮಾಫಿಯಾ ಸಕ್ರಿಯತೆ ಹಾಗೂ ಆಡಳಿತದ ಅವ್ಯವಸ್ಥೆಗಳ ಕುರಿತು ಆಕ್ರೋಶ ವ್ಯಕ್ತಪಡಿಸಿದ ಶಾಸಕ ಎಚ್.ಡಿ.ರೇವಣ್ಣ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಹಾಸನ ತಹಶೀಲ್ದಾರ್ ಗೀತಾ ವಿರುದ್ಧ ಆರೋಪ ಮಾಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಹಾಗೂ ಹೊಳೆನರಸೀಪುರ ತಹಶೀಲ್ದಾರ್ಗಳು ಭೂಮಾಫಿಯಾ ಜೊತೆ ಶಾಮೀಲಾಗಿದ್ದಾರೆ. ಅಧಿಕಾರಿಗಳಿಗೆ ಕೆಲಸ ಹೇಳಿದರೆ ಜಿಲ್ಲಾಧಿಕಾರಿ ಅಥವಾ ಸಚಿವರ ಹೆಸರನ್ನು ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಜಿಲ್ಲಾಧಿಕಾರಿ ಹುದ್ದೆಗೆ ಕೆ.ಎನ್. ಲತಾಕುಮಾರಿ ಅನರ್ಹರು. ನನ್ನ ರಾಜಕೀಯ ಜೀವನದಲ್ಲಿ ಇಂತಹ ಜಿಲ್ಲಾಧಿಕಾರಿಯನ್ನು ನೋಡಿಲ್ಲ. ಕಂದಾಯ ಇಲಾಖೆಯಲ್ಲಿ ಲೂಟಿಕೋರರು ಕುಳಿತುಕೊಂಡಿದ್ದಾರೆ ಎಂದರು.

ಕಿತ್ತನಕೆರೆ ಗ್ರಾಮದ ದ್ಯಾವಮ್ಮ ಎಂಬ ವೃದ್ಧೆಯ ಪ್ರಕರಣವನ್ನು ಉದಾಹರಿಸಿದ ರೇವಣ್ಣ, ಪತಿ ಮರಣದ ಬಳಿಕ ಪೌತಿ ಖಾತೆ ಮಾಡಿಕೊಡಲು 90 ದಿನ ಕಳೆದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಬದಲಾಗಿ ದುಡ್ಡು ಪಡೆದು ಜಮೀನು ಬೇರೆಯವರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಬಡವರ ಕಣ್ಣೀರು ಹಾಕಿಸುತ್ತಿರುವ ಅಧಿಕಾರಿಗಳಿಗೆ ಶಾಪ ತಟ್ಟುತ್ತದೆ. ದ್ಯಾವಮ್ಮ ಪ್ರಕರಣವನ್ನು ಜಿಲ್ಲಾಧಿಕಾರಿ ತಕ್ಷಣ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಹಾಸನ ತಹಶೀಲ್ದಾರ್ ಗೀತಾ ಅವರು ಭೂಮಾಫಿಯಾ ಜೊತೆ ಸೇರಿ ಅಕ್ರಮ ಖಾತೆ ಮಾಡಿಕೊಡುತ್ತಿದ್ದಾರೆ. ಅವರನ್ನು ತಕ್ಷಣ ಅಮಾನತು ಮಾಡಬೇಕು. ಅವರು ಎಷ್ಟು ಹಣ ಪಡೆದಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

85 ವರ್ಷದ ವೃದ್ಧೆಯನ್ನು ಎಸಿ ಕೋರ್ಟ್ಗೆ ಅಲೆದಾಡುವಂತೆ ಮಾಡಿರುವುದು ಮಾನವೀಯತೆಯಿಲ್ಲದ ನಡೆ ಎಂದು ದೂರಿದರು.

ಜಿಲ್ಲೆಯಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಮಲ್ಲಪ್ಪನಹಳ್ಳಿ ಗ್ರಾಮದಲ್ಲಿ ಈ ಚಟುವಟಿಕೆಗಳು ಜೋರಾಗಿವೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. ಸದನದಲ್ಲಿ ಪ್ರಶ್ನೆ ಕೇಳಿದರೂ ತನಿಖೆ ನಡೆಯುತ್ತಿದೆ ಎಂಬ ಉತ್ತರ ಮಾತ್ರ ಕೊಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಕಾಂಗ್ರೆಸ್ ಸರ್ಕಾರ ಶಾಶ್ವತ ಎಂದು ಭಾವಿಸಿ ಕೆಲಸ ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಜಿಲ್ಲೆಯ ಕಂದಾಯ ಇಲಾಖೆಯ ಅಕ್ರಮಗಳ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಬೇಕು ಎಂದು ಮುಖ್ಯಮಂತ್ರಿ ಅವರಿಗೆ ಒತ್ತಾಯಿಸುವುದಾಗಿ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260319-36-900589567

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.