ಹಾಸನ: ಹೇಮಾವತಿ ಜಲಾಶಯದಿಂದ ಹೇಮಾವತಿ ಎಡದಂಡೆ ನಾಲೆಯ ಮೂಲಕ ಮೇ 10 ರಿಂದ 19 ರವರೆಗೆ ಕುಡಿಯುವ ನೀರಿನ ಅವಶ್ಯಕತೆಗೆ ಅನುಗುಣವಾಗಿ ನಿಗದಿತ ಪ್ರಮಾಣದಲ್ಲಿ ನೀರನ್ನು ಹರಿಸಲಾಗುವುದು ಎಂದು ಹೇಮಾವತಿ ಯೋಜನಾ ವೃತ್ತದ ಸೂಪರಿಂಟೆಂಡ್ ಎಂಜಿನಿಯರ್ ಹಾಗೂ ಹೇಮಾವತಿ ಜಲಾಶಯದ ಯೋಜನೆಯ ಕುಡಿಯುವ ನೀರಿನ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಜ್ಯೋತಿ ಜಿ.ಕೆ. ತಿಳಿಸಿದ್ದಾರೆ.

ನಾಲೆಯಲ್ಲಿ ನೀರು ಹರಿಸುವ ಅವಧಿಯು ತಾತ್ಕಾಲಿಕವಾಗಿದ್ದು, ಹೇಮಾವತಿ ಜಲಾನಯನ ಹಾಗೂ ಯೋಜನಾ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದಲ್ಲಿ ಪೂರ್ವ ಮುಂಗಾರು ಮಳೆಯ ಸ್ಥಿತಿ-ಗತಿಗಳನ್ನು ಅವಲೋಕಿಸಿ, ಕುಡಿಯುವ ನೀರಿಗಾಗಿ ನಾಲೆಗಳ ಮೂಲಕ ನೀರನ್ನು ಹರಿಸಲು ಹಾಗೂ ನಿಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಕುಡಿಯುವ ನೀರಿಗಾಗಿ ಮೀಸಲಿಟ್ಟಿರುವ ಪ್ರಮಾಣದಷ್ಟು ನೀರನ್ನು ಮಾತ್ರ ಜಲಾಶಯದಿಂದ ಹರಿಸಲಾಗುವುದು. ಸದ್ಯ ನೀರಿನ ಅಭಾವವಿದ್ದು, ಅದನ್ನು ಅಚ್ಚುಕಟ್ಟು ವ್ಯಾಪ್ತಿಯ ಯಾವುದೇ ಕೃಷಿ ಚಟುವಟಿಕೆಗಳಿಗೆ ಬಳಸುವಂತಿಲ್ಲ. ಯೋಜನಾ ವ್ಯಾಪ್ತಿಯ ಎಲ್ಲ ಅಧಿಕಾರಿಗಳು, ನೀರು ಪೋಲಾಗದಂತೆ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಯೋಜನಾ ವ್ಯಾಪ್ತಿಯ ಸಾರ್ವಜನಿಕರು ಹಾಗೂ ರೈತರಿಗೆ ಸೂಕ್ತ ತಿಳಿವಳಿಕೆ ನೀಡಿ, ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾರ್ವಜನಿಕರು ಮತ್ತು ಅಚ್ಚುಕಟ್ಟುದಾರರು ಸುಗಮ ನೀರು ನಿರ್ವಹಣೆ ನಡೆಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ಮೈಸೂರು ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೇ 4 ರಂದು ನಡೆದಿದ್ದ ಯೋಜನೆಯ ಕುಡಿಯುವ ನೀರಿನ ಸಲಹಾ ಸಮಿತಿಯ ಸಭೆಯಲ್ಲಿ, ನೀರು ಹರಿಸುವ ಕುರಿತು ನಿರ್ಣಯಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-51-730182281

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.