ಹಾಸನ: ಹಿಮ್ಸ್ ಮಕ್ಕಳ ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಸೇವೆ ಮತ್ತು ಸೌಲಭ್ಯಗಳು ಖಾಸಗಿ ಆಸ್ಪತ್ರೆಗಳಿಗೆ ಸಮಾನವಾಗಿಯೇ ಅಲ್ಲ, ಕೆಲವೊಂದು ವಿಷಯಗಳಲ್ಲಿ ಅದಕ್ಕಿಂತಲೂ ಉತ್ತಮವಾಗಿದೆ. ವಿಶೇಷವಾಗಿ ಸ್ವಚ್ಛತೆ, ಮಕ್ಕಳು ಮತ್ತು ತಾಯಿಯ ಆರೈಕೆ ಹಾಗೂ ವೈದ್ಯಕೀಯ ಸೇವೆಗಳ ವ್ಯವಸ್ಥೆ ಗಮನ ಸೆಳೆಯುವಂತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶುಭಂ ಶುಕ್ಲಾ ಹೇಳಿದರು.

ಗುರುವಾರ ನಗರದ ಹಿಮ್ಸ್ ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ವಿವಿಧ ವಿಭಾಗಗಳನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು.

ವೈದ್ಯರು ಮತ್ತು ಸಿಬ್ಬಂದಿಯಿಂದ ಕೆಲವು ಮೂಲಸೌಕರ್ಯಗಳ ಬೇಡಿಕೆ ಬಂದಿದೆ. ಅವುಗಳನ್ನು ಪರಿಶೀಲಿಸಿ ಯಾವ ಯೋಜನೆ ಅಥವಾ ಅನುದಾನದಡಿ ಸೌಲಭ್ಯ ಕಲ್ಪಿಸಬಹುದು ಎಂಬುದರ ಕುರಿತು ಕ್ರಮ ಕೈಗೊಳ್ಳಲಾಗುವುದು. ತಾಯಂದಿರು ಮತ್ತು ಮಕ್ಕಳಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರಕಿಸಿಕೊಡುವುದು ಸರ್ಕಾರದ ಆದ್ಯತೆ ಎಂದರು.

ಶಿಶು ಮರಣ ಪ್ರಮಾಣ (ಐಎಂಆರ್) ಕಡಿಮೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ತಾಯಂದಿರಿಗೆ ಉತ್ತಮ ಆರೋಗ್ಯ ಸೇವೆ, ನವಜಾತ ಶಿಶುಗಳ ಆರೈಕೆ ಹಾಗೂ ಪೌಷ್ಟಿಕತೆ ಸಂಬಂಧಿತ ವಿಚಾರಗಳ ಕುರಿತು ವೈದ್ಯರೊಂದಿಗೆ ಚರ್ಚೆ ನಡೆಸಲಾಗಿದೆ. ಕೆಲವು ವಿಭಾಗಗಳಲ್ಲಿ ಇನ್ನೂ ಅಭಿವೃದ್ಧಿ ಅಗತ್ಯವಿದೆ. ಅವುಗಳನ್ನು ಹಂತ ಹಂತವಾಗಿ ಸುಧಾರಿಸಲಾಗುವುದು ಎಂದು ತಿಳಿಸಿದರು.

ಮುಂದಿನ ಬಾರಿ ಸರ್ಪ್ರೈಸ್ ಭೇಟಿ: ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಆಸ್ಪತ್ರೆಗೆ ಭೇಟಿ ನೀಡುತ್ತೇನೆ. ಆಗ ಪೂರ್ವ ಸೂಚನೆ ಇಲ್ಲದೇ ಸರ್ಪ್ರೈಸ್ ಭೇಟಿ ನೀಡಿ ಸೇವೆಗಳ ಸ್ಥಿತಿಗತಿ ಪರಿಶೀಲಿಸುತ್ತೇನೆ ಎಂದು ಎಚ್ಚರಿಸಿದರು.

ಕೆಲ ವಿಭಾಗಗಳಲ್ಲಿ ಸಿಬ್ಬಂದಿ ಕೊರತೆ ಇರುವುದನ್ನು ಒಪ್ಪಿಕೊಂಡ ಅವರು, ಅಗತ್ಯ ಇರುವ ಕಡೆ ಮಾನವ ಸಂಪನ್ಮೂಲ ಒದಗಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅನಿಲ್ ಕುಮಾರ್, ಹಿಮ್ಸ್ ಆಡಳಿತಾಧಿಕಾರಿಗಳು ಸೇರಿದಂತೆ ವೈದ್ಯರು, ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-36-1159744803

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.