ಹಿರೀಸಾವೆ: ಚೌಡೇಶ್ವರಿ ದೇವಿಯ ರಥೋತ್ಸವ ಏ.1ರಂದು ನಡೆಯಲಿದ್ದು, ಭಕ್ತರು ಸಕಲ ಸಿದ್ಧತೆ ಕೈಗೊಂಡಿದ್ದಾರೆ.

ಸೋಮವಾರ ಮಧ್ಯಾಹ್ನ ಮೂಲ ದೇವಸ್ಥಾನಕ್ಕೆ ಹೂವಿನ ಅಲಂಕಾರ ಮಾಡಲಾಗಿತ್ತು. ಮಂಗಳವಾರ ನೂರಾರು ಭಕ್ತರಿಂದ ವಿಶೇಷ ಪೂಜೆ ನಡೆಯಲಿದೆ. ಎರಡು ದಿನದಿಂದ ರಥವನ್ನು ಸ್ವಚ್ಛಗೊಳಿಸಿದ್ದು, ಬಟ್ಟೆಯ ಬಾವುಟ ಮತ್ತು ಹೂವಿನ ಶೃಂಗಾರ ಮಾಡಬೇಕಿದೆ.

ಹೊನ್ನೇನಹಳ್ಳಿ ಮತ್ತು ಹಿರೀಸಾವೆಯ ಗ್ರಾಮ ದೇವತೆಯಾದ ಚೌಡೇಶ್ವರಿ ದೇವಿಯ ‘ನಮ್ಮೂರ ಹಬ್ಬ’ವನ್ನು ಈ ಎರಡು ಗ್ರಾಮಗಳಲ್ಲಿ ವಿವಿಧ ಸಂಪ್ರದಾಯಗಳೊಂದಿಗೆ 11 ದಿನಗಳಿಂದ ಆಚರಿಸುತ್ತಿದ್ದಾರೆ. ಪ್ರತಿ ದಿನ ರಾತ್ರಿ ಒಂದೊಂದು ಮನೆತನದವರು ಚೌಡೇಶ್ವರಿ ದೇವಿಯ ಉತ್ಸವ ನಡೆಸುತ್ತಿದ್ದು, ಎರಡು ಗ್ರಾಮಗಳಲ್ಲಿ ಜನಪದ ಶೈಲಿಯ ರಂಗವನ್ನು ಕುಣಿಯುತ್ತಾರೆ. ಶೋಭಾನೆ ಪದಗಳನ್ನು ಹೇಳುತ್ತಾರೆ.

ಹಿರೀಸಾವೆಯಲ್ಲಿನ ಕುಂಬಾರರಿಂದ ಹಬ್ಬಕ್ಕೆ ವಿಶೇಷ ಮಡಿಕೆಗಳನ್ನು (ಕುಂಭ) ತಯಾರಿಸಿದ್ದಾರೆ. ಮಂಗಳವಾರ ಬೆಳಿಗ್ಗೆ ಹೊನ್ನೇನಹಳ್ಳಿ ಗ್ರಾಮಸ್ಥರು ಹಸಿ ಈಚಲು ಗರಿಯಿಂದ ಮಣ್ಣಿನ ಮಡಿಕೆಯಲ್ಲಿ ಮಡೆ ಅನ್ನ ಬೇಯಿಸುವುದು ವಿಶೇಷ. ಅಂದು ರಾತ್ರಿ ಅಲಂಕೃತ ಮಡೆಗಳನ್ನು ಹೊತ್ತ ಭಕ್ತರು ಹೆಬ್ಬಾರಮ್ಮ ದೇವರ ಜೋತೆಯಲ್ಲಿ ಮೆರವಣಿಗೆ ನಡೆಸಲಿದ್ದು, ಹರಕೆ ಹೊತ್ತ ಭಕ್ತರು ಉರುಳು ಸೇವೆ, ಬಾಯಿ ಬೀಗದ ಸೇವೆಗಳನ್ನು ಸಲ್ಲಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-36-116840997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.