ಹಾಸನ: ‘ಹಾಸ್ಟೆಲ್ಗಳಲ್ಲಿ ಮೂಲಸೌಕರ್ಯ ಕೊರತೆ ಬಗ್ಗೆ ವಿದ್ಯಾರ್ಥಿಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ನಗರದಲ್ಲಿನ ವಿವಿಧ ವಸತಿ ನಿಲಯಗಳಿಗೆ ಈಚೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಆಕಾಶವಾಣಿ ಹಿಂಭಾಗದಲ್ಲಿರುವ ಕಲ್ಲುಕಟ್ಟಡ ಬಿಸಿಎಂ ಹಾಸ್ಟೆಲ್, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಗಳನ್ನು ಆಲಿಸಿದರು. ನೀರು, ಆಹಾರ, ವಾಸ್ತವ್ಯ ಮತ್ತು ಸ್ವಚ್ಛತೆ ಸೇರಿದಂತೆ ಹಲವು ಮೂಲಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸಿದರು.

ಪರಿಶೀಲನೆ ವೇಳೆ ಹಾಸ್ಟೆಲ್ ವಾರ್ಡನ್ಗಳು ಹಾಗೂ ಸಿಬ್ಬಂದಿ ಜೊತೆಗೂ ಮಾತನಾಡಿದ ಸ್ವರೂಪ್, ‘ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಕೊರತೆ ಉಂಟಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು. ದೂರದ ಜಿಲ್ಲೆಗಳಿಂದ ವಿದ್ಯಾಭ್ಯಾಸಕ್ಕಾಗಿ ಬಂದಿರುವ ವಿದ್ಯಾರ್ಥಿಗಳನ್ನು ಸಮರ್ಪಕವಾಗಿ ನೋಡಿಕೊಳ್ಳಬೇಕು. ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಸೂಚಿಸಿದರು.

‘ಹಾಸ್ಟೆಲ್ಗಳಲ್ಲಿ ಉತ್ತಮ ಪರಿಸರ ಹಾಗೂ ಸೌಲಭ್ಯಗಳು ಇದ್ದಾಗ ಮಾತ್ರ ವಿದ್ಯಾರ್ಥಿಗಳು ಸುಗಮವಾಗಿ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಕೈಗೊಂಡು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.

ಕಾಮಗಾರಿಗೆ ಚಾಲನೆ: ನಗರದ ಉದಯಗಿರಿ ಬಡಾವಣೆಯಲ್ಲಿ ₹85 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಗುರುವಾರ ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಬಡಾವಣೆಯ ನಿವಾಸಿಗಳಿಗೆ ದೀರ್ಘಕಾಲದಿಂದ ಎದುರಾಗುತ್ತಿದ್ದ ರಸ್ತೆ ಹಾಗೂ ಒಳಚರಂಡಿ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಗುಣಮಟ್ಟದಲ್ಲಿ ಹಾಗೂ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯರಿಗೆ ಸುಗಮ ಸಂಚಾರ ಮತ್ತು ಸಮರ್ಪಕ ನೀರು ಹರಿವಿನ ವ್ಯವಸ್ಥೆ ಲಭ್ಯವಾಗಲಿದೆ ಎಂದು ಹೇಳಿದರು.

ನಗರಸಭೆಯ ಮಾಜಿ ಸದಸ್ಯ ವಾಸುದೇವ್, ಕೆಆರ್ಡಿಇಎಲ್ ಸಹಾಯಕ ಎಂಜಿನಿಯರ್ ನವ್ಯಶ್ರೀ, ಸ್ಥಳೀಯ ನಿವಾಸಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-36-1051575074

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.