ಹಾಸನ: ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ (ಹುಡಾ) ವತಿಯಿಂದ ಭೂಮಾಲೀಕರು ಮತ್ತು ಪ್ರಾಧಿಕಾರದ ಸಹಭಾಗಿತ್ವದಲ್ಲಿ ಶೇ 50:50 ಅನುಪಾತದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ಬಿ.ಜಿ.ಎಸ್.ಕೆ. ವಸತಿ ಬಡಾವಣೆ ರಾಜ್ಯದಲ್ಲೇ ಮಾದರಿ ಹೈಟೆಕ್ ನಗರವಾಗಿ ರೂಪುಗೊಳ್ಳಲಿದೆ ಎಂದು ಹುಡಾ ಅಧ್ಯಕ್ಷ ಪಟೇಲ್ ಶಿವಪ್ಪ ಹೇಳಿದರು.

ನಗರದ ಹುಡಾ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ತಾಲ್ಲೂಕಿನ ಕಸಬಾ ಹೋಬಳಿಯ ಬೂವನಹಳ್ಳಿ, ಗೇಕರವಳ್ಳಿ, ಸಮುದ್ರವಳ್ಳಿ ಹಾಗೂ ಕೆಂಚಟವಳ್ಳಿ ಗ್ರಾಮಗಳ ವಿವಿಧ ಸರ್ವೆ ನಂಬರಿನ ಒಟ್ಟು 1,145 ಎಕರೆ 32 ಗುಂಟೆ ಜಮೀನಿನಲ್ಲಿ ವಸತಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ ಎಂದು ತಿಳಿಸಿದರು.

ಈ ಯೋಜನೆಗೆ ಸರ್ಕಾರವು 2020ರ ನವೆಂಬರ್ 2ರಂದು ಪೂರ್ವಾನುಮತಿ ನೀಡಿದ್ದು, 2022ರ ಜುಲೈ 29ರಂದು ಅಭಿವೃದ್ಧಿ ಕಾಮಗಾರಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. 2022ರ ಅಕ್ಟೋಬರ್ 31ರಂದು ₹890 ಕೋಟಿ ಮೊತ್ತದ ಟೆಂಡರ್ಗೆ ಸರ್ಕಾರ ಅನುಮೋದನೆ ನೀಡಿದ್ದು, ನವೆಂಬರ್ 7 ರಂದು ಗುತ್ತಿಗೆದಾರ ಸಂಸ್ಥೆಗೆ ಕಾರ್ಯಾದೇಶ ನೀಡಲಾಗಿದೆ ಎಂದು ವಿವರಿಸಿದರು.

13,909 ನಿವೇಶನಗಳ ನಿರ್ಮಾಣ: ವಸತಿ ಯೋಜನೆಯಲ್ಲಿ ವಿವಿಧ ಅಳತೆಯ ಒಟ್ಟು 13,909 ನಿವೇಶನಗಳು ರೂಪುಗೊಳ್ಳಲಿವೆ. ಇದರಲ್ಲಿ 20X30, 30X40, 30X50, 40X60 ಹಾಗೂ 50X80 ಅಡಿ ಅಳತೆಯ ನಿವೇಶನಗಳು ಸೇರಿವೆ. ಒಟ್ಟು ನಿವೇಶನಗಳಲ್ಲಿ ಸುಮಾರು 7,200 ನಿವೇಶನಗಳು ಭೂಮಾಲೀಕರಿಗೆ ಹಂಚಿಕೆ ಆಗಲಿದ್ದು, 5,935 ನಿವೇಶನಗಳು ಸಾರ್ವಜನಿಕರಿಗೆ ಲಭ್ಯವಾಗಲಿವೆ. ಮೂಲೆ ಹಾಗೂ ವಾಣಿಜ್ಯ ನಿವೇಶನಗಳಾದ 1,265 ನಿವೇಶನಗಳನ್ನು ಇ-ಹರಾಜು ಮೂಲಕ ವಿತರಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರಿಂದ ಈಗಾಗಲೇ 27,821 ಅರ್ಜಿಗಳು ಸ್ವೀಕರಿಸಲಾಗಿದ್ದು, ಬೇಡಿಕೆ ಹೆಚ್ಚಿರುವುದರಿಂದ ಪಾರದರ್ಶಕ ಇ-ಲಾಟರಿ ವ್ಯವಸ್ಥೆ ಮೂಲಕ ನಿವೇಶನ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು.

ನಿವೇಶನ ಹಂಚಿಕೆಗಾಗಿ ಬೆಂಗಳೂರಿನ ‘ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್’ ಸಂಸ್ಥೆಯು ವಿಶೇಷ ಸಾಫ್ಟ್ವೇರ್ ಸಿದ್ಧಪಡಿಸಿದ್ದು, ಭೂಮಾಲೀಕರು ಹಾಗೂ ಸಾರ್ವಜನಿಕರಿಗೆ ವಿದ್ಯುನ್ಮಾನ ಯಂತ್ರದ ಮೂಲಕ ಹಾಸನಾಂಬ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಪಾರದರ್ಶಕವಾಗಿ ಲಾಟರಿ ಪ್ರಕ್ರಿಯೆ ನಡೆಸುವ ಯೋಜನೆ ಇದೆ ಎಂದು ಹೇಳಿದರು.

ಹೈಟೆಕ್ ನಗರ ನಿರ್ಮಾಣ: ಬಿಜಿಎಸ್ಕೆ ಬಡಾವಣೆಯಲ್ಲಿ 80 ಅಡಿ, 40 ಅಡಿ ಹಾಗೂ 30 ಅಡಿ ಅಗಲದ ರಸ್ತೆಗಳನ್ನು ನಿರ್ಮಿಸಲಾಗಿದ್ದು, ಭವಿಷ್ಯದ ಸಂಚಾರ ದಟ್ಟಣೆಯನ್ನು ಗಮನದಲ್ಲಿ ಇಟ್ಟುಕೊಂಡು ನಗರ ವಿನ್ಯಾಸ ರೂಪಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳ ನಗರಾಭಿವೃದ್ಧಿ ಅಧಿಕಾರಿಗಳು ಬಡಾವಣೆಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ್ದು, ಇದನ್ನು ರಾಜ್ಯದ ಮಾದರಿ ಯೋಜನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

ಈಗಾಗಲೇ ಶೇ 80ರಿಂದ ಶೇ 95ರಷ್ಟು ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿವೆ. ಕುಡಿಯುವ ನೀರು ಪೂರೈಕೆಗೆ ರೈಲ್ವೆ ಇಲಾಖೆಯಿಂದ ಅನುಮತಿ ದೊರೆತಿದ್ದು, ಅಗತ್ಯ ಹಣ ಪಾವತಿಸಲಾಗಿದೆ. ವಿದ್ಯುತ್ ಸಮಸ್ಯೆ ನಿವಾರಣೆಗೆ ಸಹ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬಿಜಿಎಸ್ಕೆ ಬಡಾವಣೆಯು ವಿಮಾನ ನಿಲ್ದಾಣ ಮತ್ತು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವುದರಿಂದ ಮಂಗಳೂರು, ತುಮಕೂರು, ಬೆಂಗಳೂರು, ಮೈಸೂರಿಗೆ ಹತ್ತಿರವಾಗಿದೆ. ಆದ್ದರಿಂದ ಹಾಸನದ ನಿವೇಶನಗಳಿಗೆ ಹೆಚ್ಚಿನ ಬೇಡಿಕೆ ಇದೆ ಎಂದರು.

1,836 ರೈತ ಕುಟುಂಬಗಳು 1,145.32 ಎಕರೆ ಜಮೀನು ನೀಡಿವೆ. 50:50 ಅನುಪಾತದಲ್ಲಿ ಸರ್ವೆ ಮಾಡಿ 13,909 ನಿವೇಶನ ಹಂಚಲಾಗುತ್ತಿದೆ. ಪ್ರಾಧಿಕಾರದ ಆಯುಕ್ತರು ಮತ್ತು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

ಹುಡಾ ಆಯುಕ್ತ ರಮೇಶ್ ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-36-1585684026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.